ಮಡಿಕೇರಿ, ಅ. ೧೭: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಸ್ಮಾರಕ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಎನ್.ಎಸ್. ಬೋಸ ರಾಜು, ಶಾಸಕ ಡಾ.ಮಂಥರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನ ವನದಲ್ಲಿ ಪೂಜ್ಯ ಗಾಂಧೀಜಿಯವರ ಚಿತಾಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ೫೦ ಲಕ್ಷ ರೂ. ಬಿಡುಗಡೆ ಮಾಡಿದೆ. ಗಾಂಧಿ ಸ್ಮಾರಕ ಭವನ ಪೂರ್ಣ ಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಯಾವುದೇ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಳ್ಳಬಾರದು ಎಂದು ತಾಕೀತು ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾ ಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳಿಸುವಂತೆ ಸಂಬAಧಪಟ್ಟ ಎಂಜಿನಿಯರ್ಗೆ ಸೂಚಿಸಿದರು.
ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನವನವನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಮಾತನಾಡಿ, ಗಾಂಧೀಜಿಯವರ ಚಿತಾಭಸ್ಮವಿರುವುದು ಗುಜರಾತ್ ರಾಜ್ಯದ ಸಬರಮತಿ ಹಾಗೂ ಮಡಿಕೇರಿಯಲ್ಲಿ ಎಂಬುದು ವಿಶೇಷ ವಾಗಿದೆ. ಆ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನ ವನವನ್ನು ಆಕರ್ಷಣೀಯವಾಗಿ ನಿರ್ಮಿಸಬೇಕು ಎಂದು ಸಲಹೆ ಮಾಡಿದರು.
ಮಾಜಿ ಸಚಿವರು ಹಾಗೂ ಸರ್ವೋದಯ ಸಮಿತಿ ಕಾರ್ಯಕಾರಿ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಮಡಿಕೇರಿಗೆ ಭೇಟಿ ನೀಡಿ ಗಾಂಧಿ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದು, ಈ ಸ್ಥಳಕ್ಕೆ ಗಾಂಧಿ ಮೈದಾನ ಎಂದು ಹೆಸರು ಬಂದಿದೆ. ಈ ನಿಟ್ಟಿನಲ್ಲಿ ಗಾಂಧೀಜಿ ಅವರ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ಉದ್ಯಾನವನ ನಿರ್ಮಿಸುವಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆದಿದ್ದು, ಈ ಸ್ಮಾರಕ ಉದ್ಯಾನವನ ಕಾಮಗಾರಿಯನ್ನು ಆದಷ್ಟು ತ್ವರಿತಗತಿಯಲ್ಲಿ ಪೂರ್ಣಗೊಳಿ ಸುವಂತಾಗಬೇಕು ಎಂದು ಸಲಹೆ ನೀಡಿದರು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಜಿಲ್ಲಾಡಳಿತ ಸಹಕಾರ ದಲ್ಲಿ ಸರ್ವೋದಯ ಸಮಿತಿ ವತಿಯಿಂದ ಕಳೆದ ೬೫ ವರ್ಷಗಳಿಂದ ಸರ್ವಧರ್ಮ ಪ್ರಾರ್ಥನೆ ಮಾಡಿಕೊಂಡು ಬರಲಾಗಿದೆ. ಕಳೆದ ವರ್ಷ ೫೦ ಲಕ್ಷ ರೂ. ಬಿಡುಗಡೆ ಯಾಗಿದ್ದು, ಸ್ಮಾರಕ ಉದ್ಯಾನವನ ಕಾಮಗಾರಿಗೆ ಯಾವುದೇ ತೊಂದರೆಯಾಗದAತೆ ಗಮನಹರಿಸ ಬೇಕು. ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದಾಗ ಅವರ ಅಂತಿಮ ದರ್ಶನಕ್ಕೆ ತೆರಳಿದ ಕೊಡಗು ಜಿಲ್ಲೆಯ ಸರ್ವೋದಯ ಸಮಿತಿಯ ಮುಖಂ ಡರು ಕೊಡಗಿಗೆ ತಂದಿದ್ದ ಗಾಂಧೀಜಿ ಯವರ ಚಿತಾಭಸ್ಮವನ್ನು ಜಿಲ್ಲಾಡ ಳಿತದ ವಶದಲ್ಲಿ ಜಿಲ್ಲಾ ಖಜಾನೆಯಲ್ಲಿ ಇರಿಸಲಾಗಿದ್ದು, ಚಿತಾಭಸ್ಮವನ್ನು ಗಾಂಧೀಜಿ ಸ್ಮಾರಕದಲ್ಲಿ ಇರಿಸಿ ರಾಜ್ಘಾಟ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಬೇಕಿದೆ ಎಂದು ವಿವರಿಸಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಕೊಡಗು ಜಾನಪದ ಪರಿಷತ್ ಕೋಶಾಧಿಕಾರಿ ಸಂಪತ್ ಕುಮಾರ್, ಸರ್ವೋದಯ ಸಮಿತಿ ಸದಸ್ಯರಾದ ಟಿ.ಎಂ.ಮುದ್ದಯ್ಯ, ಪ್ರಕಾಶ್ ಆಚಾರ್ಯ, ರಾಜೇಶ್ ಯಲ್ಲಪ್ಪ, ಚುಮ್ಮಿ ದೇವಯ್ಯ, ಅಂಬೆಕಲ್ಲು ನವೀನ್, ಕಾನೆಹಿತ್ಲು ಮೊಣ್ಣಪ್ಪ, ರೇವತಿ ರಮೇಶ್, ವಾಸುದೇವ, ಚಂದ್ರಶೇಖರ್, ಪ್ರೇಮ ಕೃಷ್ಣಪ್ಪ, ಯಶೋಧ, ಪ್ಯಾನ್ಸಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.
ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ನಿರೂಪಿಸಿದರು. ಸರ್ವೋದಯ ಸಮಿತಿ ಸದಸ್ಯರು ವಂದೇ ಮಾತರಂ ಗೀತೆ ಹಾಡಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ವಂದಿಸಿದರು.