ಮಡಿಕೇರಿ, ಅ. ೧೭: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ನಗರದ ಜಿ.ಟಿ. ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡದೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ ಎಂದು ದೂರಿದರು. ಐಟಿ ರೇಡ್ ಮೂಲಕ ಕಾಂಗ್ರೆಸ್ನ ಕೋಟ್ಯಂತರ ರೂಪಾಯಿ ಹಗರಣ ಬಯಲಿಗೆ ಬಂದಿದ್ದು, ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಜೀವ ವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರ ಬಿಜೆಪಿ ಅಧ್ಯಕ್ಷ ಮನುಮಂಜುನಾಥ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ಸದಸ್ಯರಾದ ಸಬಿತಾ, ಮಂಜುಳಾ ಹಾಗೂ ಕೆ.ಎಸ್.ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.