ಮಡಿಕೇರಿ, ಅ. ೧೮: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಆಶ್ರಯದಲ್ಲಿ ಎಂ. ಬಾಡಗ-೧ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಕೈತೊಳೆಯುವ ದಿನಾಚರಣೆಯನ್ನು ಆಚರಿಸಲಾಯಿತು.

‘ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿಗೆ ಕೀಲಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಕುಶನ್ ರೈ, ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.

ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ ಸ್ವಚ್ಛತೆ ಮತ್ತು ಕೈತೊಳೆಯುವ ಆರು ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರಾದ ನಿಂಗಪ್ಪ, ಅಂಗನವಾಡಿ ಸಹಾಯಕಿ ಪ್ರೀತ, ಮಕ್ಕಳು ಮತ್ತು ಪೋಷಕರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ ಸ್ವಾಗತಿಸಿ, ವಂದಿಸಿದರು.ಕಡಗದಾಳು ಅಂಗನವಾಡಿ ಕೇಂದ್ರ

ಮಡಿಕೇರಿ: ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ‘ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿಗೆ ಒಂದು ಕೀಲಿ’ ಎಂಬ ಘೋಷವಾಕ್ಯದೊಂದಿಗೆ ಕೈತೊಳೆಯುವ ದಿನವನ್ನು ಆಚರಿಸ ಲಾಯಿತು. ಅಂಗನವಾಡಿ ಕಾರ್ಯಕರ್ತೆ ಅನಿಲ ಕೈ ತೊಳೆಯುವ ವಿಧಾನ ವನ್ನು ತಿಳಿಸಿದರು. ಕಡಗದಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಕಲ್ಮೇಶ್ ಕೈತೊಳೆಯುವ ವಿಧಾನವನ್ನು ಪ್ರಾತ್ಯಕ್ಷಿತೆಯ ಮುಖಾಂತರ ತೋರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಡಗದಾಳು ಗ್ರಾ.ಪಂ.ನ ಸ್ವಚ್ಛ ಘಟಕದ ಸಿಬ್ಬಂದಿ, ಅಂಗನವಾಡಿ ಕೇಂದ್ರದ ಮಕ್ಕಳು, ಸಹಾಯಕಿ ಹೇಮಲತಾ ಹಾಜರಿದ್ದರು.