ಚೆಯ್ಯಂಡಾಣೆ, ಅ. ೧೭: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಪಾರಾದ ಘಟನೆ ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯಲ್ಲಿ ಮಂಗಳವಾರ ನಡೆದಿದೆ. ನಾಪೋಕ್ಲುವಿನಿಂದ - ಭಾಗಮಂಡಲಕ್ಕೆ ತೆರಳುವ ಮುಖ್ಯ ರಸ್ತೆಯ ಚೋನಕೆರೆ ಶಾಲಿಮಾರ್ ಮಿಲ್ಲಿನ ಮುಂಭಾಗದಲ್ಲಿ ಘಟನೆ ನಡೆದಿದೆ.

ನಾಪೋಕ್ಲು ಕಡೆಯಿಂದ ತೆರಳುತ್ತಿದ್ದ ಮಾರುತಿ ಆಲ್ಟೊ ಕಾರು ಹಾಗೂ ಎಮ್ಮೆಮಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಮಾರುತಿ ೮೦೦ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡು ಕಾರಿನ ಮುಂಭಾಗ ಜಖಂಗೊAಡಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.