ಗೋಣಿಕೊಪ್ಪಲು, ಅ. ೧೭ : ಅತ್ಯಂತ ರೋಚಕತೆಯಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಎಸ್‌ಡಿಎಂ ಉಜಿರೆ ವಿರುದ್ಧ ಕಾಸಗೋಡು ತಂಡ ಜಯಗಳಿಸುವ ಮೂಲಕ ೪೫ನೇ ವರ್ಷದ ಶ್ರೀ ಕಾವೇರಿ ದಸರಾ ಸಮಿತಿಯ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಗೋಣಿಕೊಪ್ಪ ಶಿವಾಜಿ ಸೇನೆ ಆಯೋಜಿಸಿದ್ದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ರೈಸಿಂಗ್ ಸ್ಟಾರ್ ಕಾಸರಗೋಡು ವಿಜಯದ ನಗೆ ಬೀರುವ ಮೂಲಕ ೨ನೇ ವರ್ಷದ ರಾಜ್ಯಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಉಜಿರೆಯ ಎಸ್‌ಡಿಎಂ ತಂಡ ದ್ವಿತೀಯ ಸ್ಥಾನ ಪಡೆದರೆ, ಮೂಡುಬಿದಿರೆ ತಂಡ ತೃತೀಯ ತೃಪ್ತಿ ಪಡೆದುಕೊಂಡಿತು.

ನಗರದ ಕಾವೇರಿ ಕಲಾ ವೇದಿಕೆಯ ಸಮೀಪವಿರುವ ಮೈದಾನದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟವು ಶಿವಾಜಿ ಸೇನೆಯ ವತಿಯಿಂದ ನಡೆಯಿತು. ೨ನೇ ವರ್ಷದ ಕಬಡ್ಡಿ ಪಂದ್ಯಾವಳಿಯು ೨ ದಿನಗಳ ಕಾಲ ಯಶಸ್ವಿಯಾಗಿ ಜರುಗಿತು.

ಈ ಬಾರಿ ರಾಜ್ಯದ ವಿವಿಧ ಭಾಗದಿಂದ ೧೬ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದವು. ಶಿವಾಜಿ ಸೇನೆಯ ಅಧ್ಯಕ್ಷ ಎ.ಎನ್. ಅಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲು ಹೆಚ್ಚಿನ ಅವಕಾಶ ಸಿಗಲಿದೆ. ಕೊಡಗಿನಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಲಭಿಸುತ್ತಿದ್ದು ವಿಶೇಷವಾಗಿ ಗ್ರಾಮೀಣ ಕ್ರೀಡೆಗೆ ಆದ್ಯತೆ ನೀಡುವಂತಾಗಲಿ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಶುಶ್ರೂತಗೌಡ ಮಾತನಾಡಿ, ಯುವಕರು ಕೇವಲ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಮಯವನ್ನು ವ್ಯರ್ಥ ಮಾಡುವುದರಿಂದ ಏನು ಪ್ರಯೋಜನವಿಲ್ಲ ಶಾರೀರಿಕವಾಗಿ ಆರೋಗ್ಯವಂತರಾಗಲು ಕ್ರೀಡೆ ಸಹಕಾರಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಕ್ರೀಡೆಗೆ ತನ್ನದೆ ಆದ ವೈಶಿಷ್ಟö್ಯವಿದ್ದು, ಇದರಲ್ಲಿ ನಾನಾ ತರದ ಪ್ರಯೋಜನಗಳು ದೊರೆಯುತ್ತದೆ ಆ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡೆ ಆಯೋಜಿಸಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ದಾನಿಗಳಾದ ಉದ್ಯಮಿಗಳಾದ ಅಧ್ಯಕ್ಷ ಪಿ.ಎ.ಕುಮಾರ್, ಎಂ.ಜಿ.ಮೋಹನ್, ಟಿ.ಟಿ.ಜಾನ್ ಥೋಮಸ್, ಹೊಸೂರು ಗ್ರಾ.ಪಂ.ಸದಸ್ಯ ಕೊಲ್ಲೀರ ಧನು ಪೂಣಚ್ಚ, ಶಿವಾಜಿ ಯುವ ಸೇನೆಯ ಗೌರವ ಅಧ್ಯಕ್ಷ ಕೊಲ್ಲೀರ ದಯಾಕಾವೇರಿಯಪ್ಪ, ಜೆಸಿಐ ರಾಷ್ಟಿçÃಯ ಉಪಾಧ್ಯಕ್ಷ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ದಸರಾ ಸಮಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ, ಕಾರ್ಯದರ್ಶಿ ಶೀಲಾ ಬೋಪಣ್ಣ, ಕಳತ್ಮಾಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯವತಿ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಸಮಾಜಸೇವಕರಾದ ಡಾ. ಶುಶ್ರೂತಗೌಡರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿವಾಜಿ ಯುವ ಸೇನೆಯ ಉಪಾಧ್ಯಕ್ಷರಾದ ಸಿಂಗಿ ಸತೀಶ್ ಕಾರ್ಯಕ್ರಮ ನಿರೂಪಿಸಿ ಡಿ.ಎ.ವಿನೋದ್ ಸ್ವಾಗತಿಸಿ ವಂದಿಸಿದರು. ಈ ವೇಳೆ ಸಮಿತಿಯ ಪದಾಧಿಕಾರಿಗಳಾದ ಎ.ಜಿ.ಸುರೇಶ್, ಜಿ.ಪಿ.ಸ್ವಾಮಿ, ರಾಜೇಶ್‌ರೈ, ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು.