ಶನಿವಾರಸಂತೆ, ಅ. ೧೭: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಗೊಂಬೆ ಪೂಜೆ ಹಾಗೂ ಸಾಂಪ್ರದಾಯಿಕ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಾಂಪ್ರದಾಯಿಕ ಉಡುಗೆ-ತೊಡುಗೆ ಧರಿಸಿದ್ದ ವಿದ್ಯಾರ್ಥಿಗಳು ಗೊಂಬೆ ಪೂಜೆ ಮಾಡಿದರು. ಅಡುಗೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಧವಿಧದ ತಿಂಡಿ-ತಿನಿಸುಗಳನ್ನು ತಯಾರಿಸಿ ಸಂಭ್ರಮಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಂಸ್ಥೆ ಅಧ್ಯಕ್ಷ ಲಿಂಗರಾಜ್ ಮುಖ್ಯ ಅತಿಥಿಯಾಗಿ ಸಾಂಪ್ರದಾಯಿಕ ಉಡುಗೆ-ತೊಡುಗೆ ಧರಿಸಿದ್ದ ವಿದ್ಯಾರ್ಥಿಗಳು ಗೊಂಬೆ ಪೂಜೆ ಮಾಡಿದರು. ಅಡುಗೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಧವಿಧದ ತಿಂಡಿ-ತಿನಿಸುಗಳನ್ನು ತಯಾರಿಸಿ ಸಂಭ್ರಮಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಂಸ್ಥೆ ಅಧ್ಯಕ್ಷ ಲಿಂಗರಾಜ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ದಸರಾ ಹಬ್ಬಾಚರಣೆಯ ಬಗ್ಗೆ ಮಾತನಾಡಿದರು. ಮುಖ್ಯಶಿಕ್ಷಕ ಉಲ್ಲಾಸ್ ಹಾಗೂ ವಿದ್ಯಾರ್ಥಿಗಳು ಮಾತನಾಡಿ, ನವರಾತ್ರಿ ಆಚರಣೆ, ನವದುರ್ಗೆಯರ ಆರಾಧನೆಯ ಮಹತ್ವದ ಕುರಿತು ಮಾತನಾಡಿದರು. ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.