ನಾಪೋಕ್ಲು, ಅ. ೧೭: ಎನ್‌ಎಸ್ ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು ಶಿಸ್ತು, ಸಂಯಮ ಹಾಗೂ ಸೇವಾಮನೋ ಭಾವನೆ ಯನ್ನು ರೂಢಿಸಿಕೊಳ್ಳಬೇಕು ಎಂದು ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಹೇಳಿದರು.

ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಯಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಶಿಬಿರಾರ್ಥಿಗಳು ಶ್ರಮದಾನದ ಮಹತ್ವವನ್ನು ಅರಿತುಕೊಳ್ಳಬೇಕು, ಮನೆ, ವಠಾರ, ಸಮುದಾಯದ ಸ್ವಚ್ಛತೆಯತ್ತ ಗಮನಹರಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವುದೇ ಹುದ್ದೆ ಯನ್ನು ಅಲಂಕರಿಸಿ ದರೂ ಜನಸೇವೆ ಮುಖ್ಯ ಎಂಬುದನ್ನು ಮರೆಯಬಾರದು ಎಂದರು.

ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ರಾಜಮಾದಪ್ಪ ಧ್ವಜಾ ರೋಹಣವನ್ನು ನೆರವೇರಿಸಿದ ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ, ಶಿಕ್ಷಕಿ ಉಷಾರಾಣಿ, ಮೂರ್ನಾಡು ವೇಣು ಅಪ್ಪಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ, ಶಿಕ್ಷಕಿ ಉಷಾರಾಣಿ, ಮೂರ್ನಾಡು