ಮಡಿಕೇರಿ, ಅ. ೧೮: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗ ದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ ಅನುಷ್ಠಾನಗೊಳಿಸ ಲಾಗುತ್ತಿದ್ದು, ಯೋಜನೆಯಡಿ ಸಹಾಯ ಧನ, ಸಾಲ-ಸೌಲಭ್ಯ ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ ೩ ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರ ಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವವರು ಉಪ್ಪಾರ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿ ರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ ವಾಗಿದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ನಿಗಮದ-ಸರ್ಕಾರದ ಯಾವುದೇ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.೩.೫೦ ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ ೨೧ ವರ್ಷಗಳಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು. ೯) ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿ ಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩, ವಿಕಲ ಚೇತನರಿಗೆ ಶೇ. ೫, ತೃತೀಯ ಲಿಂಗಿ ಗಳಿಗೆ ಶೇ. ೧ ಮೀಸಲಾತಿ ಇರಿಸಿದೆ.

ರಾಜ್ಯ ಸರ್ಕಾರದ ನಿಗಮದ ಯೋಜನೆಗಳ ವಿವರ: ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ- ಈ ಯೋಜನೆಯಲ್ಲಿ ಕನಿಷ್ಟ ೧ ಎಕರೆ ಜಮೀನು ಹೊಂದಿರಬೇಕು. ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯ ವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ hಣಣಠಿ://uಠಿಠಿಚಿಡಿಚಿ ಜeveಟoಠಿmeಟಿಣ. ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ. ೦೮೦-೨೨೨೫೨೫೫೫ ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಸಂಖ್ಯೆ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಸೇವಾಸಿಂಧು ಪೋರ್ಟಲ್ ನಲ್ಲಿ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ ೩ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.