ಸಿದ್ದಾಪುರ, ಅ. ೧೯: ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಘಟಕ ವತಿಯಿಂದ ೩೦ನೇ ವರ್ಷದ ಅದ್ಧೂರಿ ಆಯುಧ ಪೂಜೆ ಕಾರ್ಯಕ್ರಮವನ್ನು ತಾ. ೨೩ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸೂದನ ಸತೀಶ್ ತಿಳಿಸಿದರು.
ನಗರದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಸ್ಲೋ ಸೈಕಲ್ ರೇಸ್, ೧೫ರಿಂದ ೨೦ವರ್ಷ ವಯೋಮಿತಿಯವರಿಗೆ ರಸ್ತೆ ಓಟ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ವಾಹನ ಚಾಲಕರ ಸಂಘದÀ ಅಧ್ಯಕ್ಷ ಸುರೇಶ್ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮವು ನಾಲ್ಕು ವಿಭಾಗಗಳಲ್ಲಿ ನಡೆಯುತ್ತಿದೆ. ಒಂದರಿAದ ಏಳನೇ ತರಗತಿವರೆಗೆ ಭರತನಾಟ್ಯ, ಜಾನಪದ ನೃತ್ಯ ಸಾಮೂಹಿಕ ನೃತ್ಯ, ಪ್ರೌಢಶಾಲಾ ವಿಭಾಗದಲ್ಲಿ ಭರತನಾಟ್ಯ, ಜಾನಪದ ನೃತ್ಯ, ಸಾಮೂಹಿಕ ನೃತ್ಯ, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸಾಮೂಹಿಕ ನೃತ್ಯ, ಜಾನಪದ ನೃತ್ಯ, ನೃತ್ಯಶಾಲಾ ವಿಭಾಗದಲ್ಲಿ ಸಾಮೂಹಿಕ ನೃತ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಂಜೆ ೬ ಗಂಟೆಗೆ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಸೂದನ ಸತೀಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಪ್ರೇಮ ಗೋಪಾಲ್, ಉಪಾಧ್ಯಕ್ಷ ಪಳನಿಸ್ವಾಮಿ, ವಕೀಲ ರತ್ನಾಕರ ಶೆಟ್ಟಿ, ಜಿಲ್ಲಾ ಎಸ್ಎನ್ಡಿಪಿ ಯೂನಿಯನ್ ಅಧ್ಯಕ್ಷ ವಿ.ಕೆ ಲೋಕೇಶ್, ಉದ್ಯಮಿಗಳಾದ ಜೋಸೆಫ್ ಶ್ಯಾಂ, ವೆಂಕಪ್ಪ ರೈ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಸಾಧಕರಿಗೆ ಸನ್ಮಾನ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾತ್ರಿ ಕಣ್ಣನೂರಿನ ಸಂಗೀತ ಮೆಲೋಡಿಯಸ್ ಬಳಗದಿಂದ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಅನೀಶ್ ಕೆಎಂ, ಜಿಮ್ಮಿ ಸಿಕ್ವೆರಾ, ಸಂಘದ ಉಪಾಧ್ಯಕ್ಷ ರತೀಶ್, ಸದಸ್ಯರಾದ ದಾಸನ್, ರಾಧಾಕೃಷ್ಣ ಹಾಜರಿದ್ದರು.