ಜೆಡಿಎಸ್ ರಾಜ್ಯ ಘಟಕ ವಿಸರ್ಜನೆ - ಹೆಚ್.ಡಿ.ಕೆ.ಗೆ ಹಂಗಾಮಿ ಜವಾಬ್ದಾರಿ

ಬೆಂಗಳೂರು, ಅ. ೧೯: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಒಳಗೊಂಡ ಸಮಿತಿ ಸಂಪೂರ್ಣವಾಗಿ ವಿಸರ್ಜಿಸಲಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹಂಗಾಮಿ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ರಾಷ್ಟಿçÃಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹೇಳಿದರು. ಜೆಪಿ ಭವನದಲ್ಲಿ ನಡೆದ ಉನ್ನತ ನಾಯಕರ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಪಕ್ಷದ ಉನ್ನತ ನಾಯಕರ ಸಭೆಯಲ್ಲಿ ಜೆಡಿಎಸ್ ರಾಜ್ಯ ಘಟಕ ವಿಸರ್ಜಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕುಮಾರಸ್ವಾಮಿ ಅವರ ರಾಜಕೀಯ ನಡೆಯನ್ನು ರಾಷ್ಟಿçÃಯ ನಾಯಕರು ಗಮನಿಸಿದ್ದಾರೆ. ಪಕ್ಷದ ಜವಾಬ್ದಾರಿ ಅವರಿಗೆ ನೀಡಿದರೆ ಅನುಕೂಲವಾಗುತ್ತದೆ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಅವರ ನಾಯಕತ್ವಕ್ಕೆ ರಾಷ್ಟçಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ ಎಂದರು. ಬಿಜೆಪಿ ಜತೆಗಿನ ಮೈತ್ರಿಯನ್ನು ಇಬ್ರಾಹಿಂ ಸೇರಿದಂತೆ ಪಕ್ಷದ ನಾಯಕರು, ಶಾಸಕರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಅಸಮಾಧಾನವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಅವಕಾಶವಿತ್ತು. ಆದರೆ, ಕೆಲವರು ಪಕ್ಷಕ್ಕೆ ಮುಜುಗರವಾಗುವ ನಡೆ ಅನುಸರಿಸಿದರು ಎಂದು ಹೇಳಿದರು.

ಡಿ.ಕೆ.ಶಿ. ಮೇಲಿನ ಎಫ್‌ಐಆರ್ ರದ್ದು ಅರ್ಜಿ ವಜಾ

ಬೆಂಗಳೂರು, ಅ. ೧೯: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಸಂಬAಧಿಸಿದAತೆ ಇಂದು ಹೈಕೋರ್ಟ್ ತೀರ್ಪು ನೀಡಿದ್ದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ವಿಚಾರಣೆಯ ಎಫ್‌ಐಆರ್ ರದ್ದು ಕೋರಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ತನಿಖೆಗೆ ನೀಡಿದ್ದ ಮಧ್ಯಂತರ ತಡೆ ಕೂಡ ತೆರವು ಮಾಡಲಾಗಿದೆ. ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಸಂಬAಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಏಪ್ರಿಲ್‌ನಲ್ಲಿ ಪೂರ್ಣಗೊಂಡಿತ್ತು. ಕರ್ನಾಟಕ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು. ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಡಿಕೆಶಿ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಅನುಮತಿ ನೀಡಿದ್ದು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಆದೇಶ ಹೊರಡಿಸಿದೆ. ಶಿವಕುಮಾರ್ ಅವರು ಸಾಕಷ್ಟು ವಿಳಂಬದ ನಂತರ ಅರ್ಜಿ ಸಲ್ಲಿಸಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ಸಿಬಿಐನ ಬಹುತೇಕ ತನಿಖೆ ಮುಕ್ತಾಯವಾಗಿದೆ ಎಂದು ಕೋರ್ಟ್ ತಿಳಿಸಿದೆ.

ಜೆಡಿಎಸ್‌ಗೆ ನಾನೇ ಅಧ್ಯಕ್ಷ-ಸಿ.ಎಂ. ಇಬ್ರಾಹಿಂ

ಬೆAಗಳೂರು, ಅ. ೧೯: ಜೆಡಿಎಸ್ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲ. ಅವರ ನಿರ್ಧಾರವನ್ನು ಕೋರ್ಟ್ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದರು. ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ನನ್ನ ಪುತ್ರನನ್ನು ಕಳೆದುಕೊಂಡು ಹುಬ್ಬಳ್ಳಿ ಈದ್ಗಾ ಸಮಸ್ಯೆ ಬಗೆಹರಿಸಿದ್ದೆ. ಜೆಡಿಎಸ್ ಸರ್ಕಾರ ಗಟ್ಟಿ ಮಾಡಿದ್ದೆ. ಈಗ ತಮ್ಮ ಪುತ್ರನ ಸಲುವಾಗಿ ಅನ್ಯರ ಮಕ್ಕಳನ್ನು ದೇವೇಗೌಡರು ಬಲಿ ಕೊಡುತ್ತಿದ್ದಾರೆ. ಮಹಾಭಾರತದಲ್ಲಿ ಧೃತರಾಷ್ಟçನಿಗಾದ ಸ್ಥಿತಿಯೇ ದೇವೇಗೌಡರಿಗೂ ಬರಲಿದೆ ಎಂದರು. ಪಕ್ಷದ ಕಾರ್ಯಕಾರಿ ಸಮಿತಿ ವಿಸರ್ಜಿಸಿದ ನಂತರ ಕುಮಾರಸ್ವಾಮಿಗೇ ಏಕೆ ಪಟ್ಟ ನೀಡಿದರು. ಜಿ.ಟಿ. ದೇವೇಗೌಡರಿಗೆ ನೀಡಬಹುದಿತ್ತಲ್ಲ? ನಾನು ನಾಲ್ಕು ವರ್ಷಗಳ ಅವಧಿ ಇದ್ದ ವಿಧಾನ ಪರಿಷತ್ ಸ್ಥಾನ ತೊರೆದು ಪಕ್ಷಕ್ಕೆ ಬಂದೆ. ಇನ್ನೂ ಎಷ್ಟು ಮನೆ ಹಾಳು ಮಾಡಿದ್ದೀರಿ. ೯೦ ವರ್ಷವಾಗಿದೆ. ಇನ್ನಾದರೂ ನಿಲ್ಲಿಸಿ, ನನ್ನನ್ನು ಕೆಣಕಿದರೆ ನೆಟ್ಟಗಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರಿಂದ ಕಿರುಕುಳ ಆರೋಪ - ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಲಬುರಗಿ, ಅ. ೧೯: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬAಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಆಡಿಯೋದಲ್ಲಿ ಹೇಳಿದ್ದಾರೆ. ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ. ಘಟನೆಯ ಸತ್ಯಾಸತ್ಯತೆಗಳನ್ನು ಪರೀಶೀಲಿಸಲಾಗುತ್ತಿದ್ದು ಕಲಬುರಗಿಯ ಸುಲೆಪೇಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಬಕ್ಕೆ ಕಟ್ಟಿ ಥಳಿತ ಪ್ರಕರಣ-ನಾಲ್ವರು ಪೊಲೀಸರಿಗೆ ಶಿಕ್ಷೆ

ಅಹಮದಾಬಾದ್, ಅ. ೧೯: ಖೇಡಾ ಜಿಲ್ಲೆಯ ಉಂಡೇಲಾ ಗ್ರಾಮದಲ್ಲಿ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಕ್ಕೆ ಸಂಬAಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನಾಲ್ವರು ಪೊಲೀಸರು ತಪ್ಪಿತಸ್ಥರು ಎಂದು ಘೋಷಿಸಿರುವ ಗುಜರಾತ್ ಹೈಕೋರ್ಟ್, ಅವರಿಗೆ ೧೪ ದಿನಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಈ ನಾಲ್ವರು ಪೊಲೀಸರಿಗೆ ೯೦ ದಿನಗಳ ಕಾಲಾವಕಾಶವನ್ನೂ ನೀಡಿದೆ. ನ್ಯಾಯಮೂರ್ತಿ ಎ.ಎಸ್.ಸುಪೇಹಿಯಾ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತು. ದೂರುದಾರರ ಮೇಲೆ ಪ್ರತಿವಾದಿಗಳು (ಪೊಲೀಸರು) ನಡೆಸಿದ ಹಲ್ಲೆ ಮಾನವೀಯತೆಗೆ ವಿರುದ್ಧವಾದುದು. ನಾಲ್ವರು ದೂರುದಾರರನ್ನು ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸಲಾಗಿತ್ತು. ಈ ಘಟನೆ ಉಂಡೇಲಾ ಗ್ರಾಮದಲ್ಲಿ ನಡೆದಿದ್ದರೂ, ದೇಶದಾದ್ಯಂತ ಸದ್ದು ಮಾಡಿತ್ತು ಎಂದು ಹೇಳಿದ ನ್ಯಾಯಪೀಠ, ಪೊಲೀಸರ ಬೇಷರತ್ ಕ್ಷಮೆಯನ್ನು ತಿರಸ್ಕರಿಸಿತು. ಯಾವುದೇ ರೀತಿಯ ಚಿತ್ರಹಿಂಸೆ, ಕ್ರೌರ್ಯ, ಅಮಾನವೀಯವಾಗಿ ನಡೆಸಿಕೊಳ್ಳುವುದನ್ನು ಒಪ್ಪಿಕೊಳ್ಳಲಾಗದು. ಈ ರೀತಿಯ ವರ್ತನೆ ಪ್ರಕರಣದ ತನಿಖೆ, ವಿಚಾರಣೆ ಅಥವಾ ಯಾವುದೇ ಹಂತದಲ್ಲಿ ನಡೆದರೂ ಅದು ಸಂವಿಧಾನದ ೨೧ನೇ ವಿಧಿಗೆ ವಿರುದ್ಧವಾದ ನಡೆಯಾಗುತ್ತದೆ ಎಂದು ನ್ಯಾಯಪೀಠ ಹೇಳಿತು.

ಚಂದ್ರಬಾಬು ನಾಯ್ಡುಗೆÀ ಜಾಮೀನು ನೀಡಲು ನಕಾರ

ಅಮರಾವತಿ, ಅ. ೧೯: ಕೌಶಲ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ಮಧ್ಯಂತರ ಜಾಮೀನು ನೀಡಲು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದೇ ಪ್ರಕರಣಕ್ಕೆ ಸಂಬAಧಿಸಿದ ನಾಯ್ಡು ಅವರ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ಇರುವ ಕಾರಣ ಹೈಕೋರ್ಟ್ ಈ ನಿರ್ಧಾರ ಕೈಗೊಂಡಿದೆ. ಆದರೆ, ನಾಯ್ಡು ತಮ್ಮ ಆರೋಗ್ಯ ತಪಾಸಣೆಗಾಗಿ ವೈದ್ಯರನ್ನು ಭೇಟಿಯಾಗಲು ಅವಕಾಶ ನೀಡುವ ಬಗ್ಗೆಯೂ ನ್ಯಾಯಾಲಯ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಈ ಮಧ್ಯೆ, ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ನ್ಯಾಯಾಲಯವು, ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ ೧ ರವರೆಗೆ ವಿಸ್ತರಿಸಿದೆ. ಮಾಜಿ ಮುಖ್ಯಮಂತ್ರಿ ನಾಯ್ಡು ಅವರನ್ನು ಆನ್‌ಲೈನ್ ಮೂಲಕ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶೆ ಬಿ.ಎಸ್.ವಿ. ಬಿಂದು ನಾಯ್ಡು ಅವರ ಆರೋಗ್ಯವನ್ನು ವಿಚಾರಿಸಿದರು.