ಮಡಿಕೇರಿ, ಅ. ೧೯: ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಹಿನ್ನೆಲೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಿದ್ದಾರೆ.
೨ ಕಡೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ಕಾರಣದಿಂದಾಗಿ ಪೊಲೀಸ್ ಇಲಾಖೆ ಮದ್ಯ ಮಾರಾಟ ನಿಷೇಧಕ್ಕೆ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದರನ್ವಯ ಜಿಲ್ಲಾಧಿಕಾರಿ ನಿಷೇಧ ವಿಧಿಸಿದ್ದಾರೆ.
ತಾ. ೨೪ರ ಬೆಳಿಗ್ಗೆ ೬ ಗಂಟೆಯಿAದ ತಾ. ೨೫ರ ಬೆಳಿಗ್ಗೆ ೧೦ ಗಂಟೆಯ ತನಕ ಮಡಿಕೇರಿ ನಗರ, ಗೋಣಿಕೊಪ್ಪ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ೧೦.ಕಿ.ಮೀ ಅಂತರದಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ರೆಸ್ಟೋರೆಂಟ್, ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರಡಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.