ಸುಂಟಿಕೊಪ್ಪ, ಅ. ೨೦: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ೫೩ನೇ ವರ್ಷದ ಅದ್ದೂರಿ ಆಯುಧಪೂಜಾ ಸಮಾರಂಭ ತಾ.೨೩ ರಂದು ಸಂಘದ ಸಾರ್ವಜನಿಕ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥÀರ್ ಗೌಡ ವಹಿಸಲಿದ್ದು ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಚಂದ್ರಮೌಳಿ, ಮಾಜಿ ಸಚಿವ ಬಿ.ಎ.ಜೀವಿಜಯ, ಕೊಡಗು ಜಿಲ್ಲಾಡಳಿತ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘ ನಿರ್ದೇಶಕ ಹೆಚ್.ಎನ್.ರವೀಂದ್ರ, ವಿಟ್ಲ ಮಾಜಿ ಶಾಸಕ ಕೆ.ಎಂ.ಇಬ್ರಾಹಿA, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಪಿ.ಚಂದ್ರಕಲಾ, ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಕರ್ನಾಟಕ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಪಿ.ಸಿ.ಹಸೈನಾರ್, ಕಾಫಿ ಬೆಳೆಗಾರರಾದ ಜಗನ್ನಾಥ ಶೆಣೈ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ತಾ.ಪಂ.ಮಾಜಿ ಉಪಾಧ್ಯಕ್ಷ ಜರ್ಮಿಡಿಸೋಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್, ಜಿ.ಪಂ.ಮಾಜಿ ಸದಸ್ಯರಾದ ಪಿ.ಎಂ.ಲತೀಫ್, ಭಾರತೀಶ್, ಕಾಫಿ ಬೆಳೆಗಾರರಾದ ಡಿ.ಆನಂದ ಬಸಪ್ಪ, ಕಾಫಿ ಬೆಳೆಗಾರರಾದ ವಿನೋದ್ ಶಿವಪ್ಪ, ಆನಂದ್ ಬಸಪ್ಪ, ವಿಶಾಲ್ ಶಿವಪ್ಪ,ಎಸ್.ಯು.ಜಾಹೀದ್, ಗ್ರಾ.ಪಂ.ಮಾಜಿ ಅಧ್ಯಕ್ಷ ಕ್ಲಾಡಿಯಸ್ ಲೋಬೋ, ಉದ್ಯಮಿಗಳಾದ ಮೊಯ್ದು, ಚಲನಚಿತ್ರನಟಿ ಶುಭ್ರ ಅಯ್ಯಪ್ಪ, ಎಸ್‌ಡಿಎಂ ಟ್ರಸ್ಟ್ ಸುಂಟಿಕೊಪ್ಪ ಅಧ್ಯಕ್ಷ ಮುಕುಲ್ ಮಹೇಂದ್ರ, ಜಿಲ್ಲಾ ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಎ.ಉಸ್ಮಾನ್ ಮತ್ತು ಸುಂಟಿಕೊಪ್ಪ ಗ್ರೇಡ್ ೧ ಗ್ರಾಮ ಪಂಚಾಯಿತಿಯ ಸರ್ವಸದಸ್ಯರು ಆಗಮಿಸಲಿದ್ದಾರೆ.

ಈ ಬಾರಿ ಸಂಗೀತ ರಸ ಮಂಜರಿಯ ಬದಲಾಗಿ ಸುಂಟಿಕೊಪ್ಪ ಹೋಬಳಿಯ ಜೊತೆಗೆ ನಾಟಿಕಿಟ್ಸ್ ಹಾಗೂ ಸ್ಥಳೀಯ ಶಾಲಾ ಮಕ್ಕಳಿಂದ ಡ್ಯಾನ್ಸ್ಮೇಳ ಆಯೋಜಿಸಲಾಗಿದೆ. ಅಂಗಡಿಗಳ ಅಲಂಕಾರ ಸ್ಪರ್ಧೆ, ವರ್ಕ್ಶಾಪ್ ಅಲಂಕಾರ, ದೊಡ್ಡ ವಾಹನ, ಚಿಕ್ಕ ವಾಹನಗಳ ಅಲಂಕಾರ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು.