ಮಡಿಕೇರಿ, ಅ. ೨೦: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ ತಾ. ೨೧ ರಂದು (ಇಂದು) ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ೮.೩೦ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪಾಲ್ಗೊಳ್ಳಲಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.