ಸೋಮವಾರಪೇಟೆ, ಅ. ೧೯: ಇಲ್ಲಿನ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ತಲಕಾವೇರಿಯಿಂದ ತಂದ ಪವಿತ್ರ ಕಾವೇರಿ ತೀರ್ಥವನ್ನು ಪಟ್ಟಣದಲ್ಲಿ ಸಾರ್ವಜನಿಕರಿಗೆ ವಿತರಿಸಲಾಯಿತು.
ಪಟ್ಟಣದ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜೇಸೀ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಸಿ, ನಂತರ ಸಾರ್ವಜನಿಕ ಭಕ್ತಾದಿಗಳಿಗೆ ಪವಿತ್ರ ತೀರ್ಥವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು, ಮೋಟಾರ್ ಯೂನಿಯನ್ ಅಧ್ಯಕ್ಷ ಕೆ.ಜಿ. ಸುರೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಎನ್. ದೀಪಕ್, ಪ್ರಮುಖರಾದ ಕಾಟ್ನಮನೆ ಗಿರೀಶ್, ಕಾಫಿ ಬೆಳೆಗಾರ ನಗರಳ್ಳಿ ಬಸಪ್ಪ, ವಿರೂಪಾಕ್ಷ, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸದಸ್ಯ ಜಮೀರ್, ಕಾರ್ಮಿಕ ಘಟಕದ ಶೇಷಪ್ಪ, ಜೇಕಬ್ ಸೈಮನ್, ಕಾರ್ಯದರ್ಶಿ ರಾಜಪ್ಪ, ಅಜಯ್, ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.