ಕೂಡಿಗೆ, ಅ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಕೆ.ಡಿ.ಪಿ. ಸಭೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ತಿಳಿಸಿದರು.
ಸಭೆಯು ಆರಂಭವಾಗುತ್ತಿದ್ದAತೆ ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ಕೆ.ಡಿ.ಪಿ. ಸಭೆಯನ್ನು ಮುಂದೂಡುವAತೆ ಒತ್ತಾಯ ಮಾಡಿದಾಗ ಸಭೆ ಅಧ್ಯಕ್ಷ ಭಾಸ್ಕರ್ ನಾಯಕ್, ಪ್ರಮುಖ ಅಧಿಕಾರಿ ವರ್ಗದವರು ಗೈರು ಹಾಜರಾದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ ಎಂದರು. ೯ ದಿನಗಳ ಹಿಂದೆಯೇ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಲಾಗಿದ್ದರೂ ಕೆಲವರು ನಿರ್ಲಕ್ಷö್ಯ ತೋರಿದ್ದಾರೆ ಎಂದು ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.