ಶನಿವಾರಸಂತೆ, ಅ. ೨೦: ಸಮೀಪದ ಕೊಡ್ಲಿಪೇಟೆಯ ಶ್ರೀರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಬುಧವಾರ ರಾತ್ರಿ ದುರ್ಗಾಕಲ್ಪೋಕ್ತ ಪೂಜೆ, ರಂಗ ಪೂಜೆ, ಸಾಮೂಹಿಕ ಪ್ರಾರ್ಥನೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನೆರವೇರಿತು.
ಬೆಳಿಗ್ಗೆ ದೇವಾಲಯದಲ್ಲಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಮಾಡಿ ಪೂಜಿಸಲಾಗಿತ್ತು. ರಾತ್ರಿಯ ಪೂಜಾ ಕಾರ್ಯಕ್ರಮದಲ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಹಾಗೂ ಶ್ರೀ ಚೌಡೇಶ್ವರಿ ಮಹಿಳಾ ಬಳಗದ ಸದಸ್ಯೆಯರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಶ್ರೀ ಕ್ಷೇತ್ರದ ಅರ್ಚಕ ಮಹಾಬಲೇಶ್ವರ ಜೋಷಿ ಪೂಜಾ ಕೈಂಕರ್ಯ ನೆರವೇರಿಸಿದರು. ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.