ಮಡಿಕೇರಿ, ಅ. ೧೯: ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ನಾಡ ಹಬ್ಬ ದಸರಾ ಸಂಬAಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ತಾ. ೨೪ ರಿಂದ ತಾ. ೨೫ವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಇವರಿಗೆ ಅನುಮತಿಸಿ ಆದೇಶ ನೀಡಿದೆ.

ತಾ. ೨೪ ರಂದು ಮಧ್ಯಾಹ್ನ ೨ ಗಂಟೆಯಿAದ ತಾ. ೨೫ ಬೆಳಿಗ್ಗೆ ೧೦ ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.

ಭಾರಿ ವಾಹನಗಳ ಸಂಚಾರದಲ್ಲೂ ಬದಲಾವಣೆ

ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳನ್ನು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್.ನಗರ, ಹೊಳೆನರಸೀಪುರ ಹಾಸನ ಸಕಲೇಶಪುರ ಮಾರ್ಗವಾಗಿ ಸಂಚರಿಸುವುದು,

ತಾ. ೨೪ ರಂದು ಸಂಜೆ ೪ ಗಂಟೆಯಿAದ ತಾ. ೨೫ ರಂದು ಬೆಳಿಗ್ಗೆ ೧೦ ಗಂಟೆಯ ವರೆಗೆ ಮಡಿಕೇರಿ ನಗರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ.

ಮಡಿಕೇರಿಯಲ್ಲಿ ಯಾವ ಮಾರ್ಗ ಪಾಲಿಸಬೇಕು?

¨ ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮತ್ತು ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್‌ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಮುಂದುವರೆದು ಎಸ್.ಪಿ ಕಚೇರಿ, ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು.

¨ ವೀರಾಜಪೇಟೆ, ಮೂರ್ನಾಡು ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳಿಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಮೈಸೂರು ರಸ್ತೆ ಕಡೆಗೆ ತಿರುಗಿ ಮೈಸೂರು ರಸ್ತೆಯಲ್ಲಿ ಸಾಗಿ ಚೈನ್‌ಗೇಟ್ ಮೂಲಕ ಜನರಲ್ ತಿಮ್ಮಯ್ಯ (ಮ್ಯಾನ್ಸ್ ಕಾಂಪೌAಡ್) ಮೈದಾನದಲ್ಲಿ ನಿಲುಗಡೆಗೊಳಿಸುವುದು.

¨ ಗಾಳಿಬೀಡು ಅಬ್ಬಿಫಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು.

¨ ಮೈಸೂರು, ಸಿದ್ದಾಪುರ, ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೊಟೇಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು.

¨ ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ ನಿವಾಸಿಗಳು ತಮ್ಮ ವಾಹನಗಳನ್ನು ಕ್ರಸೆಂಟ್ ಶಾಲೆಯ ಮೈದಾನದಲ್ಲಿ ನಿಲುಗಡೆಗೊಳಿಸುವುದು.

¨ ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮಧ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೇ ಹಿಂದೂಸ್ಥಾನಿ ಶಾಲೆಯ ಮೈದಾನದಲ್ಲಿ ನಿಲುಗಡೆಗೊಳಿಸುವುದು.

¨ ತಾ. ೨೪ ರಂದು ಸಮಯ ಸಂಜೆ ೪ ಗಂಟೆಯಿAದ ತಾ. ೨೫ ರ ಬೆಳಿಗ್ಗೆ ೧೦ ಗಂಟೆಯವರೆಗೆ ನಗರದೊಳಗೆ ವಾಹನ ಸಂಚಾರವನ್ನು ನಿರ್ಬಂಧಿಸುವುದು ಮತ್ತು ನಗರದೊಳಗೆ ಇರುವ ಎಲ್ಲಾ ರಸ್ತೆಗಳನ್ನು ನಿಲುಗಡೆ ರಹಿತ ರಸ್ತೆಗಳೆಂದು ಪ್ರಕಟಿಸಲಾಗಿದೆ.

ಬಸ್ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ

ಮಡಿಕೇರಿಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಆರ್.ಎಂ.ಸಿ ಯನ್ನು ಬಸ್ ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದAತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡಲಾಗುತ್ತದೆ.

ಖಾಸಗಿ ಬಸ್‌ಗಳು ನಗರದೊಳಗೆ ಆಗಮಿಸದೇ ಜನರಲ್ ತಿಮ್ಮಯ್ಯ ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ ಹತ್ತಿಸಿ ತೆರಳುವುದು ಮತ್ತು ಖಾಸಗಿ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡಲಾಗುವುದು.

ಗೋಣಿಕೊಪ್ಪ ಮಾರ್ಗದಲ್ಲೂ ಬದಲಾವಣೆ

¨ ಗೋಣಿಕೊಪ್ಪಲು ನಗರದ ಉಮಾಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್‌ನಿAದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್‌ನಿAದ ಐಪಿ ಜಂಕ್ಷನ್‌ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.

¨ ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವೀರಾಜಪೇಟೆಗೆ ಬರುವ ವಾಹನಗಳು ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವೀರಾಜಪೇಟೆಗೆ ಹೋಗುವುದು.

¨ ವೀರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್- ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು.

¨ ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಪೆರುಂಬಾಡಿ-ವೀರಾಜಪೇಟೆ-ಅಮ್ಮತ್ತಿ-ಸಿದ್ದಾಪುರ ಮೂಲಕ ಹೋಗುವುದು.

¨ ವೀರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ವೀರಾಜಪೇಟೆ-ಹಾತೂರು-ಕುಂದ-ಪೊನ್ನAಪೇಟೆ ಮಾರ್ಗವಾಗಿ ಸಂಚರಿಸುವುದು.

¨ ಬಾಳೆಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವೀರಾಜಪೇಟೆಗೆ ಹೋಗುವ ವಾಹನಗಳು-ಬಾಳೆಲೆ- ಪೊನ್ನಂಪೇಟೆ-ಕುAದ-ಹಾತೂರು ಮಾರ್ಗವಾಗಿ ವೀರಾಜಪೇಟೆಗೆ ಸಂಚರಿಸುವುದು.

¨ ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವೀರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ-ಕುAದ-ಹಾತೂರು ಮಾರ್ಗವಾಗಿ ವೀರಾಜಪೇಟೆಗೆ ಸಂಚರಿಸುವುದು.

¨ ಮೈಸೂರು-ತಿತಿಮತಿ-ಗೋಣಿP

ೆÆಪ್ಪ-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ, ಕೋಣನಕಟ್ಟೆ-ಪೊನ್ನಂಪೇಟೆ-ನಲ್ಲೂರು-ಪೊನ್ನAಪೇಟೆ ಮಾರ್ಗವಾಗಿ ಸಂಚರಿಸುವುದು.