ಮಡಿಕೇರಿ, ಅ.೧೯: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (೬ ರಿಂದ ೮ ನೇ ತರಗತಿ) ನೇಮಕಾತಿ-೨೦೨೨ರ ನೇಮಕಾತಿಗೆ ಸಂಬAಧಿಸಿದAತೆ ಉಚ್ಛ ನ್ಯಾಯಾಲಯದ ರಿಟ್ ಪಿಟಿಷನ್ ತಾ. ೧೨, ೨೦೨೩ ರ ವಿಭಾಗೀಯ ಪೀಠದ ತೀರ್ಪಿನಂತೆ ಇದೇ ಮಾರ್ಚ್ ೮ ೨೦೨೩ ರಂದು ಪ್ರಕಟಿತ ೧:೧ ರ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ತಾ. ೧೯ ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ hಣಣಠಿs://sಛಿhooಟeಜuಛಿಚಿಣioಟಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು, ಜೀವಶಾಸ್ತç ಹಾಗೂ ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆಯು ತಾ. ೨೧ ರಂದು ಬೆಳಿಗ್ಗೆ ೧೦ ಗಂಟೆಯಿAದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.

ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಇರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸೆಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಸಂಬAಧಪಟ್ಟ ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಕಡ್ಡಾಯವಾಗಿ ಹಾಜರಾಗುವುದು. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರವೇ ಹಾಜರಾಗಬೇಕು.

ಕೌನ್ಸೆಲಿಂಗ್ ಸಮಯದಲ್ಲಿ ಮೊಬೈಲ್ ಪರಿಕರವನ್ನು ಒಳಗೆ ತರುವಂತಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ಅವರು ತಿಳಿಸಿದ್ದಾರೆ.