ನಾಪೋಕ್ಲು, ಅ. ೨೨: ರಾಷ್ಟಿçÃಯ ಸೇವಾ ಯೋಜನೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ಧಿಗೊಳಿಸಿ ವಿದ್ಯಾರ್ಥಿಗಳಲ್ಲಿ ರಾಷ್ಟçಪ್ರೇಮ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವುದಾಗಿದೆ ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಹೇಳಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಂಡು ಉನ್ನತಿಯನ್ನು ಹೊಂದಲು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬೀರ ಸುಧಿ ತಿಮ್ಮಯ್ಯ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯು ಎಲ್ಲಾ ಕಾರ್ಯಕ್ರಮಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ ಮಾತನಾಡಿ, ಏಳು ದಿನಗಳ ಶಿಬಿರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ನಾಯಕತ್ವ ಕೂಡ ಬೆಳೆಸಲು ಸಹಕಾರಿಯಾಗಿದೆ ಎಂದರು.
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದಮಯಂತಿ ಏಳು ದಿನಗಳ ಶಿಬಿರದ ಕಾರ್ಯ ಚಟುವಟಿಕೆಗಳ ವರದಿಯನ್ನು ವಾಚಿಸಿದರು.
ವೇದಿಕೆಯಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ಈರಮಂಡ ಸೋಮಣ್ಣ, ಕಾರ್ಯದರ್ಶಿ ವೇಣು ಅಪ್ಪಣ್ಣ, ಪ್ರಾಂಶುಪಾಲೆ ದೇವಕಿ, ಶಿಕ್ಷಕಿ ಕುಮುದ ಉಪಸ್ಥಿತರಿದ್ದರು.