ಮಡಿಕೇರಿ, ಅ. ೨೧: ಹಾಕತ್ತೂರು-ಬಿಳಿಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ (ಖ.ಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭ ೨೦೨೪ ಮಾರ್ಚ್ ೩, ೪ ಮತ್ತು ೫ ರಂದು ಉಲಮಾ-ಉಮರ, ಸಾದತುಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ. ಅಬ್ದುಲ್ ಖಾದರ್ ತಿಳಿಸಿದ್ದಾರೆ.