ಮೂರ್ನಾಡು, ಅ. ೨೧: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ನೂತನ ಆಡಳಿತ ಮಂಡಳಿಯ ವತಿಯಿಂದ ಮೂರ್ನಾಡು ಪಟ್ಟಣದಲ್ಲಿ ಅದ್ಧೂರಿ ಆಯುಧ ಪೂಜಾ ಸಮಾರಂಭಕ್ಕೆ ವಿಶೇಷ ತಯಾರಿ ನಡೆಸುತ್ತಿದೆ. ಇಲ್ಲಿನ ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ಅಲಂಕೃತ ವೇದಿಕೆಯಲ್ಲಿ ೩೦ನೇ ವರ್ಷದ ಆಯುಧ ಪೂಜೆಯ ಸಂಭ್ರಮಾಚರಣೆ ತಾ ೨೩ ರಂದು ನಡೆಯಲಿದೆ.

ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿ ಸಲಾಗಿರುವ ವಿಜೃಂಭಣೆಯ ಆಯುಧ ಪೂಜಾ ಕಾರ್ಯಕ್ರಮವು ಅಪರಾಹ್ನ ೨ ಗಂಟೆಗೆ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯೊಂದಿಗೆ ಪ್ರಾರಂಭಗೊAಡು, ನಂತರ ಮುಖ್ಯ ರಸ್ತೆಯಲ್ಲಿ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಅಲಂಕೃತ ವಾಹನಗಳೊಂದಿಗೆ ಈ ಬಾರಿ ವಿಶೇಷವಾಗಿ ವಿಟ್ಲದ ಕಲಾ ರಸಿಕ ಆರ್ಟ್ಸ್ ಬೊಂಬೆ ಬಳಗದವರ ಬೊಂಬೆ ಕುಣಿತ ಮತ್ತು ವಾದ್ಯಗೋಷ್ಠಿ ಮೆರವಣಿಗೆಯ ಕಳೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

ಸಂಜೆಯ ವೇಳೆಗೆ ಸ್ಥಳೀಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಮತ್ತು ಜನಪ್ರಿಯ ಝೀ ಕನ್ನಡ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ನ ವಿಜೇತ ರಾಹುಲ್ ರಾವ್ ಮತ್ತು ತಂಡದ ನೃತ್ಯ ಪ್ರದರ್ಶನ ಈ ಬಾರಿ ಆಯುಧ ಪೂಜಾ ಕಾರ್ಯಕ್ರಮದ ವಿಶೇಷವಾಗಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ವಹಿಸಲಿದ್ದು, ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಉಪಾಧ್ಯಕ್ಷೆ ಬಿ.ಎಸ್. ರೇಖಾ ಬಾಲು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ನ ವಿಜೇತ ರಾಹುಲ್ ರಾವ್, ಮೂರ್ನಾಡು ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ದಂಬೆಕೋಡಿ ಕೆ. ಸುಬ್ರಮಣಿ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ವಿಜಯ್ ಕುಮಾರ್, ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿ.ಕೆ. ಲಲಿತ, ಮೂರ್ನಾಡು ಹಿಂದೂ ರುದ್ರಭೂಮಿ ಅಧ್ಯಕ್ಷ ಬಿ.ಎಸ್. ಅರುಣ್ ರೈ, ಸಂಘದ ಗೌರವಾಧ್ಯಕ್ಷ ಎನ್.ಕೆ. ಕುಂಞರಾಮ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು, ಲಯನ್ಸ್ ಕ್ಲಬ್ ಅಧ್ಯಕ್ಷೆ ಬಡುವಂಡ ಬಿಂದ್ಯಾ ಬೋಪಣ್ಣ, ಕೊಡವ ಸಮಾಜ ಅಧ್ಯಕ್ಷ ನೆರವಂಡ ಅನೂಪ್ ಉತ್ತಯ್ಯ, ಗೌಡ ಸಮಾಜ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್, ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ, ಅಯ್ಯಪ್ಪ ಯುವಕ ಮಂಡಳಿಯ ಅಧ್ಯಕ್ಷ ಕಂಬೀರAಡ ಕೆ. ಸತೀಶ್ ಮುತ್ತಪ್ಪ, ಬಂಟರ ಸಂಘದ ಅಧ್ಯಕ್ಷ ಬಿ.ಕೆ. ಚಂದ್ರಶೇಖರ್ ರೈ, ಬೇತ್ರಿಯ ಗಣೇಶ ಉತ್ಸವ ಸಮಿತಿಯ ಅಧ್ಯಕ್ಷ ಮಂಡೇಟಿರ ಅನಿಲ್ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಮೂರ್ನಾಡಿನ ನಿವೃತ್ತ ಸುಬೇದಾರ್ ಮೇಜರ್ ಬೈರಿಕುಂದಿರ ಉತ್ತಪ್ಪ, ನಿವೃತ್ತ ದೈಹಿಕ ಶಿಕ್ಷಕ ಅವರೆಮಾದಂಡ ಜಿ. ಗಣೇಶ್ ಮತ್ತು ಬಲಮುರಿಯ ನಿವೃತ್ತ ಕರ್ನಲ್ ತೊತ್ತಿಯಂಡ ಬಿ. ಸಬಿತ ಅವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು. ಅಲಂಕೃತ ಗೊಂಡ ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಆರು ಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸಾರ್ವಜನಿಕರಿಗೆ ರಾತ್ರಿ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗಿದೆ. ಸಂಘದ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳಲಾಗಿದೆ. - ನಾಗರಾಜ್