ವೀರಾಜಪೇಟೆ, ಅ. ೨೧: ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ದಲ್ಲಿರುವ ಶ್ರೀ ವನದುರ್ಗಿ ಗುಡಿ ಯಲ್ಲಿ ನವರಾತ್ರಿ ಪ್ರಯುಕ್ತ ಪಂಚಮಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಪೂಜಾ ಕಾರ್ಯ ಕ್ರಮವನ್ನು ನೆರವೇರಿಸಿಕೊಟ್ಟರು. ಕುಂಕುಮಾರ್ಚನೆ, ದೇವಿ ಅಷ್ಟೋ ತ್ತರ ಪಠಣ ಹಾಗೂ ಪಾರಾಯಣ ಮಾಡಿ ವಿಶೇಷ ಪೂಜಾ ಸೇವೆ ಯನ್ನು ಸಲ್ಲಿಸಿದರು. ಬಳಿಕ ಮಹಾ ಮಂಗಳಾರತಿ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿನಾಯಕ ಭಜನಾ ಮಂಡಳಿಯವರಿAದ ಭಜನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.