ಮಾಜಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ನಿಧನ

ನವದೆಹಲಿ, ಅ. ೨೩: ಭಾರತದ ಮಾಜಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ (೭೭) ನಿಧನರಾಗಿದ್ದಾರೆ. ಕ್ರಿಕೆಟ್‌ನಲ್ಲಿ ತಮ್ಮ ಬೌಲಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು. ೧೯೪೪ ರಲ್ಲಿ ಅಮೃತಸರದಲ್ಲಿ ಜನಿಸಿದ ಬಿಶನ್ ಸಿಂಗ್ ಬೇಡಿ, ದೇಶೀಯ ಕ್ರಿಕೆಟ್‌ನಲ್ಲಿ ದೆಹಲಿ ತಂಡಕ್ಕಾಗಿ ಆಡಿದರು, ೩೭೦ ಪಂದ್ಯಗಳಲ್ಲಿ ೧,೫೬೦ ವಿಕೆಟ್‌ಗಳೊಂದಿಗೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಪ್ರಮುಖ ವಿಕೆಟ್ ಟೇಕರ್ ಆಗಿದ್ದರು. ೧೯೬೬ ರಲ್ಲಿ ತಮ್ಮ ಅಂರ‍್ರಾಷ್ಟಿçÃಯ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ೧೯೭೫ ರ ವಿಶ್ವಕಪ್‌ನಲ್ಲಿ ಭಾರತದ ಮೊದಲ ಏಕದಿನ ಗೆಲುವಿನಲ್ಲಿ ಅವರ ಕೊಡುಗೆ ಅತ್ಯಂತ ಗಮನಾರ್ಹವಾಗಿದೆ. ಆ ಪಂದ್ಯದಲ್ಲಿ ೧೨ ಓವರ್ ಬೌಲಿಂಗ್ ಮಾಡಿದ್ದ ಅವರು ಕೇವಲ ೮ ರನ್ ನೀಡಿ ಒಂದು ವಿಕೆಟ್ ಪಡೆದು, ಭಾರತ ತಂಡದ ಗೆಲುವಿಗೆ ಕೊಡುಗೆ ನೀಡಿದ್ದರು. ಇಂಗ್ಲೆAಡ್ ವಿರುದ್ಧದ ಭಾರತದ ಐತಿಹಾಸಿಕ ೧೯೭೧ ಸರಣಿ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಾಯಕ ಅಜಿತ್ ವಾಡೇಕರ್ ಗಾಯಗೊಂಡು ಹೊರಗುಳಿದ ಬಳಿಕ ತಂಡವನ್ನು ಮುನ್ನಡೆಸಿದ ಬಿಶನ್ ಸಿಂಗ್ ಬೇಡಿ ಅವರು ಐತಿಹಾಸಿಕ ಸರಣಿ ಗೆಲುವಿಗೆ ಕಾರಣರಾದರು.

ಹುಲಿ ಉಗುರು ಹೊಂದಿದ ಆರೋಪದಡಿ ವರ್ತೂರು ಸಂತೋಷ ಬಂಧನ

ಬೆAಗಳೂರು, ಅ. ೨೩: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಹಿಂದೆAದೂ ನಡೆಯದ ಘಟನೆ ದಸರಾ ಹಬ್ಬದ ಸಂಭ್ರಮದ ಮಧ್ಯೆ ನಡೆದುಹೋಗಿದೆ. ಕೊರಳಲ್ಲಿ ಧರಿಸಿದ ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ರೈತನ ಇಮೇಜ್ ಹೊತ್ತುಕೊಂಡು ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ನನ್ನು ಅರಣ್ಯಾಧಿಕಾರಿ ಮತ್ತು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಿಗ್‌ಬಾಸ್ ಮನೆಯಿಂದ ಸಂತೋಷ್ ಅವರನ್ನು ಕರೆತಂದಿರುವ ರಾಮೋಹಳ್ಳಿ ಅರಣ್ಯಾ ಧಿಕಾರಿಗಳು ಪೊಲೀಸ್ ಕಸ್ಟಡಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅರಣ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್‌ನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್‌ನನ್ನು ಬಂಧಿಸಲಾಗಿದೆ. ದೂರು ನೀಡಿರುವ ಶರತ್ ಮಾಧ್ಯಮಗಳ ಜೊತೆ ಮಾತನಾಡಿ, ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ ತಪ್ಪು. ಸೆಲೆಬ್ರಿಟಿಗಳು ನಿಯಮ ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಕೋಲಾರ: ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

ಕೋಲಾರ, ಅ. ೨೩: ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ ನಡೆದಿದ್ದು, ಕೋಲಾರದಲ್ಲಿ ದುಷ್ಕರ್ಮಿಗಳು ಸುಪಾರಿ ಪಡೆದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಸ್ಟೀಕರ್ ರಮೇಶ್ ಕುಮಾರ್ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬವರೆ ಹತ್ಯೆಗೊಳಗಾದವರು. ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ಅಪರಿಚಿತರು ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್ ಅವರನ್ನು ಕೂಡಲೇ ಆರ್‌ಜೆ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಶ್ರೀನಿವಾಸ್ ಮುಂದಿನ ಲೋಕಸಭಾ ಚುನಾವಣೆ ಆಕಾಂಕ್ಷಿಯಾಗಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಗೃಹ ಸಚಿವ ಪರಮೇಶ್ವರ್ ಅವರಿಗೂ ಆಪ್ತರಾಗಿದ್ದರು.

ರೂ. ೧ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಕೃಷಿ ಇಲಾಖೆ ಅಧಿಕಾರಿ

ಮಂಗಳೂರು, ಅ. ೨೩: ಕೃಷಿ ಇಲಾಖೆಯ ಉಪನಿರ್ದೇಶಕರೊಬ್ಬರು ೧ ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ವಿವಿಧ ಜಾತಿಯ ಅರಣ್ಯ ಮತ್ತು ತೋಟಗಾರಿಕಾ ಸಸಿಗಳನ್ನು ಸಾರ್ವಜನಿಕರಿಗೆ ನೀಡಿದ್ದಕ್ಕೆ ಬಾಕಿ ಬಿಲ್ ಪಾವತಿಗೆ ಸಂಬAಧಿಸಿದAತೆ ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಅವರು ಲಂಚ ಕೇಳಿದ್ದರು. ದೂರುದಾರರಾದ ಎನ್‌ಪಿ ಪರಮೇಶ್ ಅವರು ಅರಣ್ಯ ಇಲಾಖೆಯಲ್ಲಿ ರೇಂಜ್ ಫಾರೆಸ್ಟ್ ಆಫೀಸರ್ (ಆರ್‌ಎಫ್‌ಒ) ಆಗಿ ಕಾರ್ಯನಿರ್ವಹಿ ಸುತ್ತಿದ್ದರು. ಆದರೆ, ಅವರನ್ನು ತಾತ್ಕಾಲಿಕವಾಗಿ ಕೃಷಿ ಇಲಾಖೆಯ ಜಲಾನಯನ ಇಲಾಖೆಗೆ ನಿಯೋಜಿಸಲಾಗಿತ್ತು. ಸದ್ಯ ಅವರು ಆಗಸ್ಟ್ ೩೧ರಂದು ತಮ್ಮ ಸ್ಥಾನದಿಂದ ನಿವೃತ್ತರಾಗಿದ್ದರು. ನರ್ಸರಿ ಮಾಲೀಕರು ಹಾಗೂ ಗುತ್ತಿಗೆದಾರರು ನೀಡಿದ್ದ ಸಸಿಗಳಿಗೆ ೫೦ ಲಕ್ಷ ರೂಪಾಯಿ ಬಾಕಿ ಪಾವತಿಸಬೇಕಿತ್ತು. ದೂರುದಾರರು ಅಕ್ಟೋಬರ್ ೪ರಂದು ಭಾರತಮ್ಮ ಅವರನ್ನು ಸಂಪರ್ಕಿಸಿ ಬಾಕಿ ಬಿಲ್ ಪಾವತಿಸುವಂತೆ ಮನವಿ ಮಾಡಿದ್ದರು. ಆದರೆ, ಅದರ ಕ್ಲಿಯರೆನ್ಸ್ಗಾಗಿ ಒಟ್ಟು ಬಿಲ್‌ನ ಶೇ ೧೫ರಷ್ಟು ಮೊತ್ತವನ್ನು ನೀಡುವಂತೆ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಕ್ಟೋಬರ್ ೨೦ ರಂದು ದೂರುದಾರರು ಬಿಲ್ ಬಗ್ಗೆ ವಿಚಾರಿಸಲು ಅಧಿಕಾರಿಯನ್ನು ಮತ್ತೆ ಭೇಟಿ ಮಾಡಿದರು ಮತ್ತು ಆ ಸಮಯದಲ್ಲಿ ಅವರು ಲಂಚದ ಮೊತ್ತವನ್ನು ೧ ಲಕ್ಷ ರೂ.ಗೆ ಇಳಿಸಿದ್ದರು. ಬಳಿಕ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅಧಿಕಾರಿಯನ್ನು ಬಂಧಿಸಲಾಗಿದೆ. ಭಾರತಮ್ಮ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ. ಸೈಮನ್ ತಿಳಿಸಿದ್ದಾರೆ.

ಬಿಜೆಪಿ ಸಖ್ಯ ತೊರೆದ ಖ್ಯಾತ ನಟಿ ಗೌತಮಿ ತಡಿಮಲ್ಲ!

ಚೆನ್ನೆöÊ, ಅ. ೨೩: ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ಸೋಮವಾರ ಬಿಜೆಪಿಯೊಂದಿಗಿನ ತಮ್ಮ ೨೫ ವರ್ಷಗಳ ಒಡನಾಟವನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದಾರೆ. ಪಕ್ಷದ ಒಂದು ವಿಭಾಗದಿಂದ ತನಗೆ ಮೋಸ ಮಾಡಿದ ವ್ಯಕ್ತಿಗೆ ಬೆಂಬಲ ಸಿಗುತ್ತಿದೆ ಎಂದು ಅವರು ಆರೋಪಿ ಸಿದ್ದಾರೆ. ೨೦೨೧ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡುವ ಭರವಸೆಯನ್ನು ಪಕ್ಷ ನೀಡಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಹೀಗಿದ್ದರೂ, ನಾನು ಬಿಜೆಪಿಗೆ ಬದ್ಧವಾಗಿದ್ದೆ ಎಂದು ತಡಿಮಲ್ಲ ಅವರು ಟ್ವೀಟ್‌ನಲ್ಲಿ ಲಗತ್ತಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿರುವ ಅವರು, ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಬಿಜೆಪಿ ತಮಿಳುನಾಡು ಮುಖ್ಯಸ್ಥ ಕೆ. ಅಣ್ಣಾಮಲೈ ಸೇರಿದಂತೆ ಇತರರನ್ನು ಟ್ಯಾಗ್ ಮಾಡಿದ್ದಾರೆ. ನಿರ್ದಿಷ್ಟ ವ್ಯಕ್ತಿಯೊಬ್ಬರು ನನ್ನ ಹಣ, ಆಸ್ತಿ ಮತ್ತು ದಾಖಲೆಗಳನ್ನು ವಂಚಿಸಿದ್ದಾರೆ. ನನಗೆ ಪಕ್ಷ ಮತ್ತು ಮುಖಂಡರಿAದ ಯಾವುದೇ ಬೆಂಬಲ ಸಿಗುತ್ತಿಲ್ಲ. ಆದರೆ, ಅವರಲ್ಲಿ ಹಲವರು ನನ್ನ ನಂಬಿಕೆಗೆ ದ್ರೋಹ ಮಾಡಿದ ಮತ್ತು ಮೋಸ ಮಾಡಿದ ವ್ಯಕ್ತಿಗೆ ಸಹಾಯ ಮತ್ತು ಬೆಂಬಲ ನೀಡುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ' ಎಂದು ಅವರು ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೈಲು ಅಪಘಾತದಲ್ಲಿ ೧೫ ಸಾವು, ೧೦೦ಕ್ಕೂ ಹೆಚ್ಚು ಮಂದಿಗೆ ಗಾಯ

ಢಾಕಾ, ಅ. ೨೩: ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ೧೫ ಮಂದಿ ಸಾವನ್ನಪ್ಪಿದ್ದರೆ, ೧೦೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯನ್ನು ಗಮನಿಸಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದ ಪೂರ್ವದಲ್ಲಿರುವ ಭೈರಾಮ್ ನಲ್ಲಿ ಸರಕು ಸಾಗಣೆ ರೈಲು ಪ್ರಯಾಣಿಕ ರೈಲಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರೈಲು ಹಳಿತಪ್ಪಿ ಈ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈವರೆಗೂ ೧೫ ಶವಗಳು ಪತ್ತೆಯಾಗಿವೆ. ಹಲವರು ಗಾಯಗೊಂಡಿದ್ದಾರೆ ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ ಈಶಾನ್ಯಕ್ಕೆ ೬೦ ಕಿಲೋಮೀಟರ್ (೩೮ ಮೈಲುಗಳು) ದೂರದಲ್ಲಿ ಈ ಅಪಘಾತ ಸಂಭವಿಸಿದೆ.