ಸೋಮವಾರಪೇಟೆ, ಅ. ೨೨: ಆಯುಧ ಪೂಜೋತ್ಸವಕ್ಕೆ ಸೋಮವಾ ರಪೇಟೆ ಪಟ್ಟಣ ಸಿಂಗಾರಗೊAಡಿದೆ. ಎಲ್ಲೆಡೆ ತಳಿರು ತೋರಣ, ಪ್ರತಿಮೆಗಳ ಅಲಂಕಾರ, ದೀಪಾಲಂಕಾರಗೊAಡಿದ್ದು, ಹಬ್ಬದ ಸಂಭ್ರಮ ಕಳೆಗಟ್ಟಿದೆ.
ಅಂಗಡಿಗಳಲ್ಲಿ ವಿಶೇಷ ಪೂಜೆ, ಕೃಷಿ, ಕೈಗಾರಿಕೆ ಸೇರಿದಂತೆ ಕೆಲಸ ಕಾರ್ಯಗಳ ಪರಿಕರಗಳಿಗೆ ಅಲಂಕಾರ ಮಾಡಿದ್ದು, ಪಟ್ಟಣದ ಹೂವಿನ ವ್ಯಾಪಾರ ಭರ್ಜರಿಯಾಗಿ ನಡೆಯತ್ತಿದೆ. ಇದರೊಂದಿಗೆ ಬೂದುಗುಂಬಳ, ನಿಂಬೆಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ.
ಪೂಜಾ ಸಾಮಾಗ್ರಿ ಅಂಗಡಿಗಳಲ್ಲಿ ವ್ಯಾಪಾರ ಜೋರಾಗಿದೆ. ಪಟ್ಟಣದ ವರ್ಕ್ಶಾಪ್ಗಳು ಆಯುಧ ಪೂಜೋತ್ಸವಕ್ಕೆ ಸ್ವಚ್ಛಗೊಳ್ಳುತ್ತಿದ್ದು, ವರ್ಕ್ ಶಾಪ್ಗಳಲ್ಲಿ ಕೆಲಸ ಸ್ಥಗಿತಗೊಳಿಸಲಾಗಿದೆ.
ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅದ್ಧೂರಿಯಾಗಿ ಆಯುಧ ಪೂಜೋತ್ಸವ ಸಮಾರಂಭ ಆಯೋಜಿಸಲಾಗಿದೆ. ಸೋಮವಾರಪೇಟೆ ಭಾಗದಲ್ಲಿ ನಡೆಯುವ ದೊಡ್ಡ ಕಾರ್ಯಕ್ರಮವಾಗಿ ಆಯುಧ ಪೂಜೋತ್ಸವ ಹೆಸರು ಗಳಿಸಿದ್ದು, ಸಾವಿರಾರು ಮಂದಿಯ ಭಾಗವಹಿಸುವಿಕೆಯಿಂದಾಗಿ ಈ ಭಾಗದ ಜನೋತ್ಸವ ಎಂದೇ ಪರಿಗಣಿಸಲ್ಪಟ್ಟಿದೆ.
ಕಾರ್ಯಕ್ರಮಕ್ಕೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳಿಗೆ ವೇದಿಕೆ ಸಿದ್ಧಗೊಂಡಿದೆ.
ಕಳೆದ ೪೬ ವರ್ಷಗಳಿಂದ ಮೋಟಾರ್ ಯೂನಿಯನ್ ವತಿಯಿಂದ ಪಟ್ಟಣದಲ್ಲಿ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಯುಧ ಪೂಜೋತ್ಸವವನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಸಹ ತಾ. ೨೩ರಂದು (ಇಂದು) ಸಮಾರಂಭ ನಡೆಯಲಿದೆ.
ತಾ.೨೩ರಂದು ಬೆಳಿಗ್ಗೆ ಸಂಘದ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವುದು. ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗುವುದು. ೧೦ ಗಂಟೆಗೆ ಖಾಸಗಿ ಬಸ್ ನಿಲ್ದಾಣದಲ್ಲಿ ಆಯುಧ ಪೂಜಾ ಸಮಾರಂಭದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಮೋಟಾರ್ ಯೂನಿಯನ್ ಅಧ್ಯಕ್ಷ ಕೆ.ಜಿ. ಸುರೇಶ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ನೃತ್ಯ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಮಧ್ಯಾಹ್ನ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಮಾಡಲಾಗುವುದು. ಸಂಜೆ ೭ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಡಾ. ಮಂಥರ್ ಗೌಡ, ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಗೌಡ, ಕಾಂಗ್ರೆಸ್ ಮುಖಂಡ ಶುಶ್ರೂತ್ ಗೌಡ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಂಘದ ಸದಸ್ಯರುಗಳಾದ ಡಿ.ಜೆ. ಪರಮೇಶ್, ಜಿ.ಆರ್. ಹಾಲಪ್ಪ ಸೇರಿದಂತೆ ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಇಂದಿರಾಗಾAಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು, ಪ.ಪಂ. ಸಿಬ್ಬಂದಿ ಆದಿಲ್ ಅವರುಗಳನ್ನು ಸನ್ಮಾನಿಸಲಾಗುವುದು. ಇದರೊಂದಿಗೆ ಅಲಂಕೃತ ವರ್ಕ್ಶಾಪ್, ವಾಹನಗಳ ಸ್ಪರ್ಧೆ, ಸಂಘದ ವತಿಯಿಂದ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.
ನAತರ ಬೆಂಗಳೂರಿನ ವಿ.ಪಿ. ಈವೆಂಟ್ಸ್ ತಂಡದಿAದ ಸಂಗೀತ ರಸಮಂಜರಿ ನಡೆಯಲಿದೆ. ಕಿರುತೆರೆಯ ಸರಿಗಮಪ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಮೂಡಿಬರಲಿದೆ.