ಐಗೂರು, ಅ. ೨೩: ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಖಾತ್ರಿ ನಡಿಗೆ ಸುಸ್ತಿರತೆಯೆಡೆಗೆ ಅಭಿಯಾನದ ಅಂಗವಾಗಿ ಹರದೂರು ಗ್ರಾಮ ಪಂಚಾಯಿತಿ ವತಿಯಿಂದ ಹೊಸತೋಟ ಗ್ರಾಮದ ವಿವಿಧಡೆಗಳಲ್ಲಿ ವೈಯಕ್ತಿಕವಾಗಿ ಹಾಗೂ ಮನೆಮನೆಗಳಿಗೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾರ್ವಜನಿಕ ಕಾಮಗಾರಿಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡಲಾಯಿತು. ಈ ಭಾಗದ ಜನರ ಸಮಸ್ಯೆಗಳನ್ನು ಜನರಿಂದಲೇ ಕೇಳಿ ತಿಳಿದು ಅವರ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪಂಚಾಯಿತಿ ಉಪಾಧ್ಯಕ್ಷ ಸಲೀಂ ಹೊಸತೋಟ ಅವರು ಎಲ್ಲರಿಗೂ ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ. ನವ್ಯ, ಪಂಚಾಯಿತಿ ಸಿಬ್ಬಂದಿ ರವಿ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.