ವೀರಾಜಪೇಟೆ, ಅ. ೨೩: ಕನ್ನಡ ರಾಜ್ಯೋತ್ಸವದ ಅಂಗವಾಗಿ ವೀರಾಜ ಪೇಟೆ ಕರ್ನಾಟಕ ಸಂಘದಿAದ ನವೆಂಬರ್ ೩ ರಂದು ವೀರಾಜಪೇಟೆ ಪುರಭವನದಲ್ಲಿ ವೀರಾಜಪೇಟೆ ಮತ್ತು ಪೊನ್ನಂಪೇಟೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ಹೇಳಿದರು.

ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯು ಶಾಲಾ ಕಾಲೇಜು ಹಾಗೂ ಸಾರ್ವಜನಿಕರಿಗೆ ಸ್ಪರ್ಧಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಹಾಡಿಗೆ ನೃತ್ಯ ತಂಡದಲ್ಲಿ ೯ ವಿದ್ಯಾರ್ಥಿಗಳಿಗೆ ಮಾತ್ರ ಒಂದು ಶಾಲೆಯಿಂದ ಒಂದು ತಂಡಕ್ಕೆ ಮಾತ್ರ ಅವಕಾಶ ಇರಲಿದೆ. ಕಾಲೇಜು ವಿಭಾಗಕ್ಕೆ ದೇಶ ಭಕ್ತಿಗೀತೆ, ಸಾರ್ವಜನಿಕರಿಗೆ ಜಾನಪದ ಗೀತೆ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.

ಖಜಾಂಚಿ ಕೋಟೆರ ಗಣೇಶ್ ತಮ್ಮಯ್ಯ ಮಾತನಾಡಿ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಪೊನ್ನಣ್ಣ, ಮಡಿಕೇರಿ ಶಾಸಕ ಮಂಥರ್‌ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಉಪಸ್ಥಿತಲಿರುವರು. ಇದೇ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾದಂಡ ತಿಮ್ಮಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಮುಂಡ್ಯೋಳAಡ ಕುಸುಮಾ ಸೋಮಣ್ಣ, ಉಪಾಧ್ಯಕ್ಷ ಅಪ್ಪನೆರವಂಡ ಜೋಯಪ್ಪ, ಮಾಜಿ ಅಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ, ನಿರ್ದೇಶಕರುಗಳಾದ ಮಳವಂಡ ಪೂಣಚ್ಚ, ಕಂಜಿತAಡ ಗಿಣಿ ಮೊಣ್ಣಪ್ಪ ಉಪಸ್ಥಿತರಿದ್ದರು.