ಮಡಿಕೇರಿ, ಅ. ೨೧: ಶಿಕ್ಷಣ ಫೌಂಡೇಶನ್ ಮತ್ತು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಡೆಲ್ ಟೆಕ್ನಾಲಜಿ ಸಹಯೋಗದಲ್ಲಿ ಗ್ರಾಮ ಡಿಜಿ ವಿಕಾಸನ ಕಾರ್ಯಕ್ರಮದಡಿ ಸೋಮವಾರಪೇಟೆ ತಾಲೂಕಿನ ೫ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಹಾಗೂ ಮಡಿಕೇರಿ ತಾಲೂಕಿನ ೨ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಸಾಧನಗಳನ್ನು ವಿತರಿಸಲಾಯಿತು.

ಕೊಡಗಿನ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ವಿತರಣೆ ಮಾಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ವೀಣಾ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ವರ್ಣಿತ್ ನೇಗಿ, ತಹಶೀಲ್ದಾರ್, ಕಾರ್ಯನಿರ್ವಹಣಾ ಅಧಿಕಾರಿಗಳು ಸೋಮವಾರಪೇಟೆ ಹಾಗೂ ಮಡಿಕೇರಿ ತಾಲೂಕು, ಶಿಕ್ಷಣ ಫೌಂಡೇಶನ್ ಸಂಸ್ಥೆಯ ಜಿಲ್ಲಾ ವ್ಯವಸ್ಥಾಪಕ ರಕ್ಷಿತ್ ಎಲ್., ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.