ಮಡಿಕೇರಿ, ಅ. ೨೩: ಮಲೆನಾಡು ಹಾಗೂ ಕರಾವಳಿ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘಟನೆ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರುವಳ್ಳಿ ಮಾಹಿತಿ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿಗೆ ಸೇರಿದ ೭ ಜಿಲ್ಲೆಗಳಾದ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಹಾಸನದ ಮಲೆನಾಡು ತಾಲೂಕುಗಳು ಅಭಿವೃದ್ಧಿಯಲ್ಲಿ ಹಿನ್ನಡೆಯಲ್ಲಿದ್ದು, ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆೆ. ಇದನ್ನು ಸರಕಾರದ ಮಟ್ಟದಲ್ಲಿ ಬಗೆಹರಿಸಿ, ಜನರಲ್ಲಿ ಜಾಗೃತಿ ಮೂಡಿಸುವುದು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಉದ್ದೇಶವಾಗಿದೆ ಎಂದರು.
ಜಿಲ್ಲೆಗಳಾದ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಹಾಸನದ ಮಲೆನಾಡು ತಾಲೂಕುಗಳು ಅಭಿವೃದ್ಧಿಯಲ್ಲಿ ಹಿನ್ನಡೆಯಲ್ಲಿದ್ದು, ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆÉ. ಇದನ್ನು ಸರಕಾರದ ಮಟ್ಟದಲ್ಲಿ ಬಗೆಹರಿಸಿ, ಜನರಲ್ಲಿ ಜಾಗೃತಿ ಮೂಡಿಸುವುದು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಉದ್ದೇಶವಾಗಿದೆ ಎಂದರು.