ಮಡಿಕೇರಿ, ಅ. ೨೩: ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಒಂಭತ್ತನೇ ದಿನವಾದ ಮಂಗಳವಾರ ವಿಜಯದಶಮಿ ಸಂದರ್ಭ ವೈವಿಧ್ಯಮಯ ಕಾರ್ಯಕ್ರಮಗಳು ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲ್ಪಟ್ಟಿದೆ.

ಅ.೨೪ ರಂದು ಮಂಗಳವಾರ ವಿಜಯದಶಮಿ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಮುದ್ರ ಸ್ಕೂಲ್ ಆಫ್ ಡ್ಯಾನ್ಸ್ ತಂಡದಿAದ ನೃತ್ಯವೈವಿಧ್ಯ, ಉಡುಪಿಯ ಭಾರ್ಗವಿ ಡ್ಯಾನ್ಸ್ ಟೀಮ್‌ನಿಂದ ಗ್ರಾವಿಟಿ ಡ್ಯಾನ್ಸ್, ಚಕ್ಕೇರ ಪಂಚಮ್ ತ್ಯಾಗ ರಾಜ್ ಮತ್ತು ತಂಡದಿAದ ಗಾನಸುಧೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ದಸರಾ ಸಾಂಸ್ಕೃತಿಕ ಸಮಿತಿಯಿಂದ ಆಯೋಜಿಸಲಾಗಿದೆ. ರಾತ್ರಿ ೧೦ ಗಂಟೆಯಿAದ ಬೆಳಗ್ಗಿನ ಜಾವ ೫ ಗಂಟೆಯವರೆಗೆ ರಾಜ್ಯದ ಹೆಸರಾಂತ ಗಾಯಕ, ಗಾಯಕಿಯರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಮಡಿಕೇರಿ ನಗರ ದಸರಾ ಸಮಿತಿಯಿಂದ ಆಯೋಜಿಸಲಾಗಿದೆ.

ರಾತ್ರಿ ೭.೩೦ ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಉದ್ಘಾಟಿಸಲಿದ್ದಾರೆ. ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಅಧ್ಯಕ್ಷತೆ ವಹಿಸಲಿದ್ದು, ಮಡಿಕೇರಿ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಪೊಲೀಸ್ ವರಿಷ್ಠಾ ಧಿಕಾರಿ ಕೆ. ರಾಮರಾಜನ್ ಮತ್ತಿತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ೧೦ ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಡಾ. ಮಂಥರ್ ಗೌಡ ವಹಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಸಂಸದ ಪ್ರತಾಪ್ ಸಿಂಹ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಚಲನಚಿತ್ರ ನಟ ಅಭಿಷೇಕ್ ಅಂಬರೀಷ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.