ಮಡಿಕೇರಿ, ಅ. ೨೩: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ ೩ ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-೩ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು(ಸಾಲ-ಸಹಾಯಧನ) ಪಡೆಯುವ ಸಂಬAಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩, ವಿಕಲಚೇತನರಿಗೆ ಶೇ. ೫ ಹಾಗೂ ತೃತೀಯ ಲಿಂಗಗಳಿಗೆ ಶೇ. ೧ ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ ಉದ್ಯೋಗ ನೇರಸಾಲ ಮತು ಸಹಾಯಧನ ಯೋಜನೆಯಡಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. ೯೮ ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯೊಳಗಿರಬೇಕು. ಕನಿಷ್ಟ ೧೦ನೇ ತರಗತಿ ಉತ್ತೀರ್ಣರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಟ ರೂ. ೧ ಲಕ್ಷಗಳಿಂದ ರೂ. ೨ ಲಕ್ಷಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. ೧೫ ರಷ್ಟು ಕನಿಷ್ಟ ರೂ. ೨೦ ಸಾವಿರಗಳಿಂದ ಗರಿಷ್ಠ ರೂ. ೩೦ ಸಾವಿರಗಳವರೆಗೆ ಸಹಾಯಧನ ಹಾಗೂ ಶೇ. ೮೫ ರಷ್ಟು ಸಾಲವನ್ನು ವಾರ್ಷಿಕ ಶೇ. ೪ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ೨ ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಜೀಜಾವು-ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ)ಡಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. ೯೮ ಸಾವಿರಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಟ ೧ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಈ ಯೋಜನೆಯಲ್ಲಿ ಘಟಕ ವೆಚ್ಚ ರೂ. ೩.೭೫ ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ. ೫೦ ಸಾವಿರಗಳ ಸಾಲವನ್ನು ಶೇ. ೪ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.

ಶೈಕ್ಷಣಿಕ ಸಾಲ ಯೋಜನೆಗಳು: ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು: ಈ ಯೋಜನೆಯಲ್ಲಿ ಸಿಇಟಿ-ಎನ್‌ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಎಚ್.ಡಿನಲ್ಲಿ ವ್ಯಾಸಂಗ ಮಡಿಕೇರಿ, ಅ. ೨೩: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ ೩ ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-೩ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು(ಸಾಲ-ಸಹಾಯಧನ) ಪಡೆಯುವ ಸಂಬAಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩, ವಿಕಲಚೇತನರಿಗೆ ಶೇ. ೫ ಹಾಗೂ ತೃತೀಯ ಲಿಂಗಗಳಿಗೆ ಶೇ. ೧ ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ ಉದ್ಯೋಗ ನೇರಸಾಲ ಮತು ಸಹಾಯಧನ ಯೋಜನೆಯಡಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. ೯೮ ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯೊಳಗಿರಬೇಕು. ಕನಿಷ್ಟ ೧೦ನೇ ತರಗತಿ ಉತ್ತೀರ್ಣರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಟ ರೂ. ೧ ಲಕ್ಷಗಳಿಂದ ರೂ. ೨ ಲಕ್ಷಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. ೧೫ ರಷ್ಟು ಕನಿಷ್ಟ ರೂ. ೨೦ ಸಾವಿರಗಳಿಂದ ಗರಿಷ್ಠ ರೂ. ೩೦ ಸಾವಿರಗಳವರೆಗೆ ಸಹಾಯಧನ ಹಾಗೂ ಶೇ. ೮೫ ರಷ್ಟು ಸಾಲವನ್ನು ವಾರ್ಷಿಕ ಶೇ. ೪ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ೨ ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಜೀಜಾವು-ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ)ಡಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. ೯೮ ಸಾವಿರಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಟ ೧ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಈ ಯೋಜನೆಯಲ್ಲಿ ಘಟಕ ವೆಚ್ಚ ರೂ. ೩.೭೫ ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ. ೫೦ ಸಾವಿರಗಳ ಸಾಲವನ್ನು ಶೇ. ೪ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.

ಶೈಕ್ಷಣಿಕ ಸಾಲ ಯೋಜನೆಗಳು: ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು: ಈ ಯೋಜನೆಯಲ್ಲಿ ಸಿಇಟಿ-ಎನ್‌ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಎಚ್.ಡಿನಲ್ಲಿ ವ್ಯಾಸಂಗ ವಿಧಿಸಲಾಗುತ್ತದೆ.

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೨೧ ವರ್ಷ ಮೇಲ್ಪಟ್ಟು ೪೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಷಿ ಚಾಲನೆ ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಮತ್ತಿತರ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್-ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ.೫೦ರಷ್ಟು ಅಥವಾ ಗರಿಷ್ಠ ರೂ. ೩ ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್-ಹಣಕಾಸು ಸಂಸ್ಥೆಗಳಿAದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್-ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.

ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೊಜನೆ: ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೊಗ ಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ಮತ್ತಿತರ ಅಲ್ಪಾವಧಿ ಕೋರ್ಸ್ಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಅರ್ಜಿದಾರರು, ಸರ್ಕಾರದ ಹಾಗೂ ನಿಗಮದ ನಿರ್ದೇಶಕ ಮಂಡಳಿಯು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ-ನಿಬಂಧನೆಗಳನ್ನು ಹೊಂದಿದವರಾಗಿರಬೇಕು.

ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ: ೮೮೬೭೫೩೭೭೯೯/ ದೂ. ೦೮೦-೨೯೯೦೩೯೯೪. ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು hಣಣಠಿs://ಞmಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದು. ಈ ಯೋಜನೆಗಳಿಗೆ ತಾ. ೩೦ ರೊಳಗೆ ಆನ್‌ಲೈನ್‌ನಲ್ಲಿ ತಂತ್ರಾAಶಗಳ ಮುಖಾಂತರ ಅರ್ಜಿ ಸಲ್ಲಿಸುವುದು. ಕಡೇ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಅಥವಾ ದೂ. ೦೮೨೭೨-೨೨೧೬೫೬ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.