ಗೋಣಿಕೊಪ್ಪಲು, ಅ. ೨೩: ನಗರದ ಪ್ರಗತಿ ಆಟೋ ಚಾಲಕರ ಸಂಘದ ವತಿಯಿಂದ ನಡೆದ ಆಯುಧ ಪೂಜೆಗೆ ಕೊಡಗಿನ ಉಸ್ತುವಾರಿ ಸಚಿವರಾದ ಬೋಸರಾಜುರವರು ಆಗಮಿಸಿ ಸ್ವಾತಂತ್ರö್ಯ ಹೋರಾಟಗಾರ ಭವನದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ನಂತರ ಕಾವೇರಿ ಕಲಾ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಗತಿ ಆಟೋ ಚಾಲಕ, ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲಂಡ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲಿರ ಬೋಪಣ್ಣ, ಎಸ್.ಎಂ.ಎ.ಜೆ.ಸಿ.ಐ. ಭಾರತದ ಉಪಾಧ್ಯಕ್ಷ ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ಮಾಜಿ ಜಿ.ಪಂ. ಸದಸ್ಯ ಬಿ.ಎನ್. ಪೃಥ್ವಿ, ಮೂಕಳೇರ ಕುಶಾಲಪ್ಪ, ಉದ್ಯಮಿ ಗುಮ್ಮಟಿರ ಕಿಲನ್ ಗಣಪತಿ, ಮಾಯಮುಡಿ ಗ್ರಾ.ಪಂ. ಅಧ್ಯಕ್ಷ ಆಪಟ್ಟೀರ ಟಾಟು ಮೊಣ್ಣಪ್ಪ, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಸೌಮ್ಯಬಾಲು, ಕಾವೇರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ಬೋಪಣ್ಣ, ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ, ತಹಶೀಲ್ದಾರ್ ಪ್ರಶಾಂತ್, ದಾನಿಗಳಾದ ಉಂಬೈ, ಶಿವಾಜಿ ರಾಜಶೇಖರ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.