ಮಡಿಕೇರಿ, ಅ. ೨೩: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಸರ್ಕಾರದ ಆದೇಶದಂತೆ ಪ್ರವರ್ಗ-೧ರಲ್ಲಿ ಬರುವ ಬೆಸ್ತ, ಅಂಬಿU-ಅAಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ ೨ ಕೊನೆಯ ದಿನವಾಗಿದೆ. ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

ಗಂಗಾ ಕಲ್ಯಾಣ ನೀರಾವರಿ ಯೋಜನೆ: ಕನಿಷ್ಟ ೨ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ ರೂ. ೯೮ ಸಾವಿರದ ಮಿತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಟ ೧೮ ವರ್ಷ ಮೇಲ್ಪಟ್ಟಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಟ ೧ ಎಕರೆ ಜಮೀನು ಹೊಂದಿರಬೇಕು.

ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ರೂ. ೩.೭೫ ಲಕ್ಷಗಳು (ವಿದ್ಯುದ್ದೀಕರಣ ಸೇರಿದಂತೆ) ಹಾಗೂ ಅವಶ್ಯವಿದ್ದಲ್ಲಿ ರೂ. ೫೦ ಸಾವಿರ ಸಾಲವನ್ನು ಶೇ. ೪ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ಇರುತ್ತದೆ.

ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ: ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರಗಳು ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಘಟಕ ವೆಚ್ಚ ರೂ. ೧ ಲಕ್ಷಗಳಿಗೆ ಶೇ. ೨೦ರಷ್ಟು ಗರಿಷ್ಠ ರೂ. ೨೦ ಸಾವಿರಗಳ ಸಹಾಯಧನ ಉಳಿಕೆ ಶೇ. ೮೦ರಷ್ಟು ಗರಿಷ್ಠ ರೂ. ೮೦ ಸಾವಿರ ವಾರ್ಷಿಕ ಶೇ. ೪ರ ಬಡ್ಡಿದರದಲ್ಲಿ ಸಾಲ, ಘಟಕ ವೆಚ್ಚ ರೂ. ೧ ಲಕ್ಷದಿಂದ ರೂ. ೨ ಲಕ್ಷಗಳವರೆಗೆ ಶೇ. ೧೫ರಷ್ಟು ಗರಿಷ್ಠ ರೂ. ೩೦ ಸಾವಿರ ಸಹಾಯಧನ ಉಳಿಕೆ ಶೇ. ೮೫ರಷ್ಟು ರೂ. ೧.೭೦ ಲಕ್ಷಗಳಿಗೆ ವಾರ್ಷಿಕ ಶೇ. ೪ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುವುದು.

ಫಲಾನುಭವಿಯು ಒಂದು ಬಾರಿ ಸಾಲ ಪಡೆದು, ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಮರು ಪಾವತಿಸಿದಲ್ಲಿ ಅಂತಹ ಫಲಾನುಭವಿಗಳಿಗೆ ಒಂದು ಬಾರಿಗೆ ಮಾತ್ರ ದುಪ್ಪಟ್ಟು ಸಾಲವನ್ನು ಗರಿಷ್ಠ ರೂ. ೨ ಲಕ್ಷಗಳವರೆಗೆ ಯಾವುದೇ ಸಹಾಯಧನವಿಲ್ಲದೇ ವಾರ್ಷಿಕ ಶೇ. ೪ರ ಬಡ್ಡಿ ದರದಲ್ಲಿ ನೀಡಲಾಗುವುದು.

ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು): ಕರ್ನಾಟಕ ರಾಜ್ಯದಲ್ಲಿ ವೃತ್ತಿಪರ, ತಾಂತ್ರಿಕ ಇತ್ಯಾದಿ ಉನ್ನತ ಕೋರ್ಸ್ಗಳ ವ್ಯಾಸಂಗಕ್ಕೆ ಪ್ರವೇಶ ಪರೀಕ್ಷಾ ಪ್ರಾಧಿಕಾರಿಂದ (ಸಿ.ಇ.ಟಿ-ಎನ್.ಇ.ಇ.ಟಿ) ಸೀಟು ಪಡೆದು ಕಾಲೇಜಿಗೆ ಸೇರ್ಪಡೆಯಾದವರಿಗೆ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲದ ಮೊತ್ತಕ್ಕೆ ವಾರ್ಷಿಕವಾಗಿ ಗರಿಷ್ಠ ರೂ. ೧ ಲಕ್ಷಗಳನ್ನು ಶೇ.೨ರ ಬಡ್ಡಿದರದಲ್ಲಿ ಸಾಲ ನೀಡುವುದು.

ಇರಬೇಕಾದ ಅರ್ಹತೆಗಳು ವಿದ್ಯಾರ್ಥಿ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನವು ಎಲ್ಲಾ ಮೂಲಗಳಿಂದ ರೂ. ೩.೫೦ ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ವಯಸ್ಸು ೩೫ ವರ್ಷ ಮೀರಿರಬಾರದು. ವಿದ್ಯಾರ್ಥಿಯು ಸರ್ಕಾರಿ ಕಾಲೇಜು - ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ, ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ-ತಾಂತ್ರಿಕ-ಉನ್ನತ ವ್ಯಾಸಂಗದ ಕೋರ್ಸ್ಗಳಲ್ಲಿ ಸಿಇಟಿ-ಎನ್‌ಇಇಟಿ ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರಬೇಕು. ವಿದ್ಯಾರ್ಥಿಯು ಶೈಕ್ಷಣಿಕ ಉದ್ದೇಶಕ್ಕೆ ಇತರೆ ಯಾವುದೇ ಬ್ಯಾಂಕ್-ಆರ್ಥಿಕ ಸಂಸ್ಥೆಗಳಿAದ ಸಾಲ ಪಡೆದಿರಬಾರದು.

ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ): ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಗಲೇ ಹಿಂದಿನ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ೨೦೨೦-೨೧ನೇ ಸಾಲಿನ ೪ನೇ ಕಂತು ಮತ್ತು ೨೦೨೨-೨೩ನೇ ಸಾಲಿನ ೨ ಕಂತುಗಳ ಸಾಲ ಪಡೆಯಲು ವ್ಯಾಸಂಗ ದೃಢೀಕರಣ ಮತ್ತು ಅಂಕಪಟ್ಟಿ ಸಲ್ಲಿಸುವುದು.

ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು: ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿಹೆಚ್.ಡಿ ಪೋಸ್ಟ್ ಡಾಕ್ಟೋರಲ್ ಮತ್ತು ಮಾಸ್ಟರ್ ಡಿಗ್ರಿ ಹಾಗೂ ತಾಂತ್ರಿಕ ಮತ್ತು ವೈದ್ಯಕೀಯ ಉನ್ನತ ಕೋರ್ಸ್ಗಳ ವ್ಯಾಸಂಗಕ್ಕೆ ಪ್ರವೇಶ ಪಡೆದವರಿಗೆ ಸಾಲದ ಮೊತ್ತ ವಾರ್ಷಿಕ ಗರಿಷ್ಠ ರೂ. ೫ ಲಕ್ಷಗಳಂತೆ ೩ ವರ್ಷಗಳ ಅವಧಿಗೆ ಶೇ. ೪ರ ಬಡ್ಡಿ ದರದಲ್ಲಿ ರೂ. ೧೫ ಲಕ್ಷಗಳ ಸಾಲ-ಸೌಲಭ್ಯ ಒದಗಿಸಲಾಗುವುದು.

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ): ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು.

ಈ ಯೋಜನೆಯಡಿ ಸ್ವಯಂ ಉದ್ಯೋಗ ಪ್ರಾರಂಭಿಸಲು ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ. ೨೦ರಷ್ಟು ಅಥವಾ ಗರಿಷ್ಠ ರೂ. ೧ ಲಕ್ಷಗಳ ಸಹಾಯಧನವನ್ನು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ನೀಡುವುದು. ಬ್ಯಾಂಕ್‌ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್‌ಗಳ ಚಾಲ್ತಿಯಲ್ಲಿರುವ ಬಡ್ಡಿ ವಿಧಿಸಲಾಗುತ್ತದೆ.

ಸ್ವಾವಲಂಬಿ ಸಾರಥಿ ಯೋಜನೆ: ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಟ ೨೧ ವರ್ಷಗಳು ಹಾಗೂ ಗರಿಷ್ಠ ೪೫ ವರ್ಷಗಳ ಮಿತಿಯೊಳಗಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯ ಸ್ವಯಂ ಟ್ಯಾಕ್ಷಿ ಚಾಲನೆ (ಙeಟಟoತಿ ಃoಚಿಡಿಜ) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ (ಟ್ಯಾಕ್ಷಿ, ಟಾಟಾ ಎಸಿ, ಗೂಡ್ಸ್) ವಾಹನವನ್ನು ಖರೀದಿಸಲು ರಾಷ್ಟಿçÃಕೃತ ಬ್ಯಾಂಕ್-ಗ್ರಾಮೀಣ ಬ್ಯಾಂಕ್‌ಗಳು ಮಂಜೂರು ಮಾಡಿದ ಸಾಲಕ್ಕೆ ಶೇ. ೫೦ರಷ್ಟು ಅಥವಾ ಗರಿಷ್ಠ ರೂ.೩ ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಬ್ಯಾಂಕ್ ಪಾಲಿನ ಸಾಲಕ್ಕೆ ಬ್ಯಾಂಕ್ ನಿಗದಿಪಡಿಸುವ ಚಾಲ್ತಿ ದರದ ಬಡ್ಡಿಯೊಂದಿಗೆ ಸಾಲದ ಮೊತ್ತವನ್ನು ನಿಗದಿತ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕೇಂದ್ರ ಆಧಾರ್ ಅಧಿನಿಯಮ, ೨೦೧೬ ಸೆಕ್ಷನ್ (೭)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ-ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ನಿಗಮದ-ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಸರ್ಕಾರ-ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ-ನಿಬಂಧನೆಗಳನ್ನು ಹೊಂದಿದವರಾಗಿರಬೇಕು. ಸರ್ಕಾರ ಮತ್ತು ನಿರ್ದೇಶಕ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರು ಸಹ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿರುತ್ತದೆ. ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು-ಸೌಲಭ್ಯವನ್ನು ಜಾರಿಗೊಳಿಸಲಾಗುವುದು. ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿAದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಡಿಕೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಅಥವಾ ನಿಗಮದವೆಬ್‌ಸೈಟ್ hಣಣಠಿ://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದಾಗಿದೆ. ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೮೬೪೦೯೯ಗೆ ಕಚೇರಿ ಸಮಯದಲ್ಲಿ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಂಪರ್ಕಿಸಬಹುದು.

ಅರ್ಜಿದಾರರು ಅರ್ಜಿಗಳನ್ನು ನವೆಂಬರ್ ೨ ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು-ಸೌಲಭ್ಯವನ್ನು ಜಾರಿಗೊಳಿಸಲಾಗುವುದು. ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿAದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಡಿಕೇರಿ ದೂ. ೦೮೨೭೨-೨೨೧೬೫೬ ಅಥವಾ ನಿಗಮದ ವೆಬ್‌ಸೈಟ್ hಣಣಠಿ://ಚಿmbigಚಿಡಿಚಿಜeveಟoಠಿmeಟಿಣ. ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.