ಕೂಡಿಗೆ, ಅ. ೨೩: ಹಾರಂಗಿ ಅಣೆಕಟ್ಟೆ ಆವರಣದೊಳಗಿರುವ ಕಾವೇರಿ ಮಾತೆ ಪ್ರತಿಮೆಗೆ ಶಾಸಕ ಡಾ. ಮಂಥರ್ ಗೌಡ ಪೂಜೆ ಸಲ್ಲಿಸಿದರು.
ತಲಕಾವೇರಿಯಿಂದ ಸಂಗ್ರಹಿಸಿ ತಂದ ಕಾವೇರಿ ತೀರ್ಥವನ್ನು ವರ್ಷಂಪ್ರತಿಯAತೆ ಈ ಬಾರಿಯು ಸುತ್ತಮುತ್ತಲಿನ ಪ್ರದೇಶಗಳ ಗ್ರಾಮಸ್ಥರು, ಇಲಾಖೆಯ ಅಧಿಕಾರಿ ವರ್ಗದವರು, ಸಿಬ್ಬಂದಿ ವರ್ಗದವರು ಸೇರಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನೆರೆದಿದ್ದ ಭಕ್ತರಿಗೆ ತೀರ್ಥವನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭ ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ನೀರು ಬಳಕೆದಾರರ ಮಹಾಮಂಡಲದ ಅಧ್ಯಕ್ಷ ಚೌಡೇಗೌಡ, ಕಾರ್ಯಪಾಲಕ ಅಭಿಯಂತರ ದೇವೇಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ ಸೇರಿದಂತೆ ನೀರಾವರಿ ನಿಗಮದ ಅಧಿಕಾರಿ ವರ್ಗದವರು, ಮತ್ತು ಸಮೀಪದ ವಿದ್ಯುತ್ ಘಟಕ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು. ಈ ಸಂದರ್ಭದಲ್ಲಿ ಮಹಾಮಂಗಳಾತಿ, ಅನ್ನಸಂತರ್ಪಣೆ ಕಾರ್ಯ ನೆರವೇರಿತು.