ಮಡಿಕೇರಿ, ಅ. ೨೫: ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯೊಂದಿಗೆ ಎಲ್ಲರೂ ಸಹೋದರತೆ ಹಾಗೂ ಸಾಮರಸ್ಯದಿಂದ ಬದುಕು ಸಾಗಿಸುವಂತಾಗಬೇಕೆAದು ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಭಿಮತ ವ್ಯಕ್ತಪಡಿಸಿದರು.

ನಾಡ ಹಬ್ಬ ದಸರ ಜನೋತ್ಸವ ಅಂಗವಾಗಿ ಇಲ್ಲಿನ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಂಗಳವಾರ ನಡೆದ ವಿಜಯದಶಮಿ ಹಬ್ಬದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ದಸರಾ ಹಬ್ಬವು ಪ್ರತಿಯೊಬ್ಬರಲ್ಲಿ ಐಕ್ಯತೆ ಮತ್ತು ಭ್ರಾತೃತ್ವ ಮೂಡಿಸುತ್ತದೆ. ದಸರಾದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುತ್ತಿರುವುದು ಈ ನಾಡಿನ ವಿಶೇಷ. ರಾಷ್ಟçದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಲು ಎಲ್ಲರೂ ಪ್ರಯತ್ನಿಸಬೇಕು. ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಟುತೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಎಲ್ಲರೂ ಭ್ರಾತೃತ್ವದಿಂದ ಬದುಕಿದಾಗ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ಪ್ರತಿಪಾದಿಸಿದರು.

ಪ್ರತಿಯೊಬ್ಬ ಮನುಷ್ಯರಿಗೂ ಒಂದೇ ರೀತಿಯ ಅಂಗಾAಗಗಳನ್ನು ದೇವರು ಸೃಷ್ಟಿಸಿರುತ್ತಾನೆ. ಕಪ್ಪು, ಬಿಳುಪು ಅಥವಾ ಕಂದು ಬಣ್ಣ ಇರಬಹುದು. ಮನುಷ್ಯನ ಅಂಗಾAಗ ರಚನೆ ಒಂದೇ ರೀತಿ ಇರುತ್ತದೆ. ಎಲ್ಲರೂ ಸಹೋದರತ್ವದಿಂದ ಬದುಕು ನಡೆಸುವಂತಾಗಬೇಕು. ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮಾತನಾಡಿ ; ಪ್ರಸಕ್ತ ವರ್ಷದಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ರೂ.೭೫ಲಕ್ಷ ಹಾಗೂ ನಂತರದಲ್ಲಿ ಹೆಚ್ಚುವರಿಯಾಗಿ ರೂ.೨೦ಲಕ್ಷ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ದಸರಾಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು. ಮಡಿಕೇರಿ ದಸರಾ ಯಶಸ್ಸಿಗೆ ಎಲ್ಲರೂ ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯ ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಾತನಾಡಿ ಈ ಬಾರಿ ಮಳೆ ಕಡಿಮೆ ಆದ ಕಾರಣ ಬರ ಎಂದು ಘೋಷಣೆಯಾಗಿದೆ. ಆದಷ್ಟು ಇತಿ ಮಿತಿಯಲ್ಲಿ ಕಾರ್ಯಕ್ರಮವನ್ನು ಆಯೊಜಿಸಬೇಕು ಎಂದು ಮುಖ್ಯಮಂತ್ರಿಯವರು ಮತ್ತು ಉಪ ಮುಖ್ಯಮಂತ್ರಿ ಅವರು ಸಲಹೆ ಮಾಡಿದ್ದರು. ಆದರೂ ಮಡಿಕೇರಿ ದಸರಾಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದಾರೆ.

ದಸರಾ ಕಾರ್ಯಕ್ರಮಕ್ಕೆ ಬಿಡುಗಡೆಯಾದ ಅನುದಾನಲ್ಲಿ ೨೦-೩೦ ಲಕ್ಷ ರೂ ಉಳಿಸಿ, ಗಾಂಧಿ ಮೈದಾನದಲ್ಲಿ ಶಾಶ್ವತ ವೇದಿಕೆ ನಿರ್ಮಾಣ ಮಾಡಲು ಪ್ರಯತ್ನಿಸ ಲಾಗುವುದು ಎಂದು ಹೇಳಿದರು.

ಪ್ರತಿಯೊಬ್ಬ ನಾಗರಿಕರಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ ಹೀಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಆದ್ಯತೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಕೃಷಿ ಜೊತೆಗೆ ಪ್ರವಾಸೋದ್ಯಮವನ್ನು ಸಹ ಅಭಿವೃದ್ಧಿಪಡಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರನಟ ಅಭಿಷೇಕ್ ಅಂಬರೀಶ್ ಮಾತನಾಡಿ ನಮ್ಮ ಕುಟುಂಬ ಮತ್ತು ಕೊಡಗು ಜಿಲ್ಲೆಗೆ ಅವಿನಾಭಾವ ಸಂಬAಧವಿದೆ. ನಮ್ಮ ತಂದೆಯವರು ಕೊಡಗು ಜಿಲ್ಲೆಯನ್ನು ಹೆಚ್ಚು ಗೌರವಿಸುತ್ತಿದ್ದರು. ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಹುಟ್ಟುವುದು ವಿಶೇಷ. ಆ ನಿಟ್ಟಿನಲ್ಲಿ ಕೊಡಗು ಒಂದು ರೀತಿ ಹೆಚ್ಚು ಪ್ರೀತಿಪಾತ್ರವಾದ ಜಿಲ್ಲೆಯಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷರು ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನಿತಾ ಪೂವಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಕರಗ ಉತ್ಸವದೊಂದಿಗೆ ಮಡಿಕೇರಿ ದಸರಾ ಆರಂಭವಾಗುತ್ತದೆ. ದಶ ಮಂಟಪಗಳ ಶೋಭಾಯಾತ್ರೆ ಮಡಿಕೇರಿ ದಸರಾ ವಿಶೇಷವಾಗಿದೆ.

ರಾಜರ ಕಾಲದಿಂದಲೂ ಮಡಿಕೇರಿ ದಸರಾ ಆಚರಿಸಿಕೊಂಡು ಬರಲಾಗಿದೆ. ಈ ಹಿಂದೆ ತನ್ವೀರ್ ಶೇಠ್ ಅವರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ ೧೦ ಲಕ್ಷ ರೂ. ಬಿಡುಗಡೆ ಮಾಡಿಸಿದ್ದರು. ಅವರ ಅವಧಿಯಿಂದ ಮಡಿಕೇರಿ ದಸರಾಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತಾ ಬಂದಿದೆ.

ಮಡಿಕೇರಿ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನಗರ ದಸರಾ ಸಮಿತಿ ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ. ಸಾಂಸ್ಕೃತಿಕ, ಜಾನಪದ, ಮಹಿಳಾ ಮತ್ತು ಮಕ್ಕಳ, ಯುವ, ಕ್ರೀಡಾ, ಕವಿಗೋಷ್ಠಿ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿ ಆಗಿದೆ ಎಂದರು.

ಹೈಕೋರ್ಟ್ ಹಿರಿಯ ವಕೀಲ ಚಂದ್ರಮೌಳಿ ಮಾತನಾಡಿ ದಸರಾ ಹಬ್ಬಕ್ಕೆ ಎಲ್ಲರೂ ಶ್ರಮಿಸಿದ್ದು, ಹಲವು ಸಂಘ ಸಂಸ್ಥೆಗಳು ಸಹ ಕೈಜೋಡಿಸಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮ ನಿರೂಪಣೆ ಯೊಂದಿಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಶಕ್ತಿ ಪತ್ರಿಕೆ ಸಂಪಾದಕ ಹಾಗೂ ದಸರ ಸಮಿತಿ ವಿಶೇಷ ಆಹ್ವಾನಿತರಾದ ಜಿ. ಚಿದ್ವಿಲಾಸ್ ಅವರು ; ಮಾಜಿ ಶಾಸಕ ಅವರ ಪ್ರಯತ್ನದಿಂದ ಗಾಂಧಿ ಮೈದಾನದಲ್ಲಿ ಬೃಹತ್ ಸಭಾಂಗಣ ನಿರ್ಮಾಣ ವಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ದಸರಾದಂತೆ ಮಡಿಕೇರಿ ದಸರಾಗೆ ಬಜೆಟ್‌ನಲ್ಲಿ ಅನುದಾನವಿರಿಸಿ, ಶಾಶ್ವತವಾದ ವೇದಿಕೆ ನಿರ್ಮಾಣವಾಗುವಂತಾಗಬೇಕೆAದು ಸಚಿವರು ಹಾಗೂ ಶಾಸಕರ ಗಮನ ಸೆಳೆದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಪೌರಾಯುಕ್ತ ವಿಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಇತರರು ಇದ್ದರು. ಧನಲಕ್ಷಿö್ಮ ಹಾಗೂ ವಿಜಯಲಕ್ಷಿö್ಮ ಸಹೋದರಿಯರು ಪ್ರಾರ್ಥಿಸಿದರೆ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ ಸ್ವಾಗತಿಸಿದರು. ಖಜಾಂಚಿ, ಅರುಣ್ ಶೆಟ್ಟಿ ವಂದಿಸಿದರು.