ವೀರಾಜಪೇಟೆ, ಅ. ೨೫: ಜೆಡಿಎಸ್ ನೂತನ ಅಧ್ಯ ಕ್ಷರಾಗಿ ಆಯ್ಕೆ ಯಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಿ.ಎ. ಮಂಜುನಾಥ್ ಅವರು ಜೆ.ಪಿ ನಗರ ಮನೆಯಲ್ಲಿ ಭೇಟಿ ಮಾಡಿ ಮುಂಬರುವ ಲೋಕಸಭೆ, ಜಿಲ್ಲಾ ಹಾಗೂ ತಾಲೂಕು ಪಂಚಾ ಯಿತಿ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು.

ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ಬಗ್ಗೆ ಕಾರ್ಯಕರ್ತರ ಜತೆ ಚರ್ಚಿಸಲಾಗುವುದು. ಯಾರು ಕೂಡ ಎದೆಗುಂದುವ ಅವಶ್ಯಕತೆ ಇಲ್ಲ ಎಂದು ಅವರು ಭರವಸೆ ನೀಡಿದ್ದಾರೆ ಎಂದು ಪಿ.ಎ ಮಂಜುನಾಥ್ ತಿಳಿಸಿದ್ದಾರೆ.