ವನ್ಯಜೀವಿ ಉತ್ಪನ್ನ ಮಾರಾಟ ತಡೆ: ಉನ್ನತಾಧಿಕಾರ ಸಮಿತಿ ರಚನೆ-ಈಶ್ವರ ಖಂಡ್ರೆ
ಬೆAಗಳೂರು, ಅ.೨೫: ಹುಲಿ ಉಗುರು, ಹುಲಿ ಹಲ್ಲು ಸೇರಿದಂತೆ ವನ್ಯಜೀವಿಗಳ ಯಾವುದೇ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಜನ ಜಾಗೃತಿ ಮೂಡಿಸಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಸಂಬAಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿದ್ದು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಎಪಿಸಿಸಿಎಫ್ (ವನ್ಯಜೀವಿ) ಇವರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ನಿರ್ದೇಶಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಗೆ ಬಂದಾಗಿನಿAದ ದಾಖಲಾಗಿರುವ (ದೂರು) ಪ್ರಕರಣಗಳು, ಕಾನೂನಿನಡಿಯಲ್ಲಿ ಕೈಗೊಂಡಿರುವ ಕ್ರಮ ಹಾಗೂ ಹಾಲಿ ದಾಖಲಾಗಿರುವ ಮತ್ತು ದಾಖಲಾಗುತ್ತಿರುವ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಒಂದು ವಾರದೊಳಗೆ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾAಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ನೆಲದ ಕಾನೂನಿನ ಮುಂದೆ ಎಲ್ಲರೂ ಸಮಾನರು. ವನ್ಯ ಜೀವಿಯ ಯಾವುದೇ ಅಂಗಾAಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಈಶ್ವರ ಖಂಡ್ರೆ ಬೀದರ್ನಲ್ಲಿಂದು ತಿಳಿಸಿದ್ದಾರೆ.
ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್, ರಾಕ್ಲೈನ್ ಮನೆಯಲ್ಲಿ ಶೋಧ
ಬೆಂಗಳೂರು, ಅ. ೨೫: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದAತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು. ಹುಲಿ ಉಗುರು ಪ್ರಕರಣಕ್ಕೆ ಸಂಬAಧಿಸಿದAತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್.ಆರ್. ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸದ ಮೇಲೂ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಅಕ್ರಮವಾಗಿ ಸಾಗಿಸುತ್ತಿದ್ದ ರೂ. ೨.೫ ಕೋಟಿ ಮೌಲ್ಯದ ಚಿನ್ನ ಜಪ್ತಿ
ಬೆಂಗಳೂರು, ಅ. ೨೫: ಬೆಂಗಳೂರಿನ ಕೆಂಪೇಗೌಡ ಅಂರ್ರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ೨.೫ ಕೋಟಿ ರೂಪಾಯಿ ಮೌಲ್ಯದ ನಾಲ್ಕು ಕೆ.ಜಿ.ಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಅಬುಧಾಬಿಯಿಂದ ಆಗಮಿಸಿದ ಇವೈ ೨೩೮ ವಿಮಾನವನ್ನು ಪರಿಶೀಲಿಸಿದ್ದು, ವಿಮಾನದ ವಾಶ್ರೂಮ್ನಲ್ಲಿ ಕಪ್ಪು ಪೌಚ್ನಲ್ಲಿ ಸುತ್ತಿದ ಚಿನ್ನದ ಪೇಸ್ಟ್ ಅನ್ನು ಜಪ್ತಿ ಮಾಡಿದ್ದಾರೆ. ೮೦,೨೧,೯೨೦ ರೂಪಾಯಿ ಮೌಲ್ಯದ ೧೩೩೧.೬೬ ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ. ಇನ್ನು ಅಕ್ಟೋಬರ್ ೨೨ ರಂದು ಕೌಲಾಲಂಪುರ್, ದುಬೈ ಮತ್ತು ಕೊಲಂಬೊದಿAದ ಬಂದ ನಾಲ್ವರು ಪ್ರಯಾಣಿಕರಿಂದ ೧.೭೬ ಕೋಟಿ ರೂಪಾಯಿ ಮೌಲ್ಯದ ಅಂದಾಜು ಮೂರು ಕೆ.ಜಿ. ಚಿನ್ನವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಾಂಜಾ ಬೆಳೆದಿದ್ದ ರೈತನ ಬಂಧನ
ಬೀದರ್, ಅ. ೨೫: ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ. ೪೭ ವರ್ಷದ ಶಿವಾಜಿ ರಾಥೋಡ್ ಎಂಬವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮೇರೆಗೆ ದಾಳಿ ನಡೆಸಿದ ಪೊಲೀಸ್ ತಂಡ ೬೩.೮೬ ಕೆ.ಜಿ. ತೂಕದ ೨೫.೫೪ ಲಕ್ಷ ಮೌಲ್ಯದ ೧೭೯ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದೆ. ‘ಪ್ರಕರಣಕ್ಕೆ ಸಂಬAಧಿಸಿದAತೆ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ರೈತನನ್ನು ಬಂಧಿಸಿದ್ದೇವೆ. ಜಮೀನಿನಲ್ಲಿ ತೊಗರಿ ಹಾಗೂ ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಈ ಸಂಬAಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.