ಮಡಿಕೇರಿ, ಅ. ೩೦ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಹಯೋಗದಲ್ಲಿ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ತಾ. ೩೧ ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು,
(ಮೊದಲ ಪುಟದಿಂದ) ಶಾಸಕ ಡಾ. ಮಂಥರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕÀ ಎ.ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ನಗರಸಭೆ ಅಧ್ಯಕ್ಷೆ ಎನ್.ಪಿ. ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಓ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಮೈಸೂರು ವಿಭಾಗದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಇತರರು ಪಾಲ್ಗೊಳ್ಳಲಿದ್ದಾರೆ.