ಮಡಿಕೇರಿ, ಅ. ೩೦: ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ವಾರ್ಷಿಕ ಎನ್ಎಸ್ಎಸ್ ಶಿಬಿರದ ಪ್ರಯುಕ್ತ ಕಾನೂನು ಅರಿವು ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಹಿರಿಯ ವಕೀಲ ರತನ್ ತಮ್ಮಯ್ಯ ಶಿಬಿರಾರ್ಥಿಗಳಿಗೆ ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ಕಾಯಿದೆ ಹಾಗೂ ಮೋಟಾರು ವಾಹನ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಉಪನ್ಯಾಸಕರಾದ ಸವಿತ ಬಿ.ಕೆ, ಲಕ್ಷಿö್ಮ, ಶಿಬಿರಾಧಿಕಾರಿ ಎನ್.ಎನ್. ಮನೋಹರ್, ಶಿಬಿರಾರ್ಥಿಗಳು ಹಾಜರಿದ್ದರು.