ಸ್ಫೋಟ ಪ್ರಕರಣ - ಸಾವಿನ ಸಂಖ್ಯೆ ೩ಕ್ಕೆ ಏರಿಕೆ

ಕೊಚ್ಚಿ, ಅ. ೩೦: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ೧೨ ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು ೨,೨೦೦-೨,೫೦೦ ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆದಿದ್ದ ಸರ್ವಪಕ್ಷ ಸಭೆಯು, ಸಮಾಜದಲ್ಲಿ ಅಪನಂಬಿಕೆ ಮತ್ತು ಅಸಹಿಷ್ಣುತೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ವಿರೋಧಿಸಲು ಸೋಮವಾರ ನಿರ್ಧರಿಸಿದೆ.

ರಾಜ್ಯದಲ್ಲಿ ಭ್ರಷ್ಟರ ಬೇಟೆ

ಬೆಂಗಳೂರು, ಅ. ೩೦: ಸೋಮವಾರ ಬೆಳ್ಳಂಬೆಳಗ್ಗೆಯೇ ರಾಜ್ಯದ ವಿವಿಧ ಸರ್ಕಾರಿ ಹುದ್ದೆಯಲ್ಲಿರುವ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ರಾಜ್ಯದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ೧೭ ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸ ಸೇರಿದಂತೆ ೭೦ಕ್ಕೂ ಹೆಚ್ಚು ಕಡೆ ಆಯಾ ನ್ಯಾಯಾಂಗ ವ್ಯಾಪ್ತಿಯ ಪೊಲೀಸರ ನೆರವಿನೊಂದಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನ, ಸ್ಥಿರಾಸ್ತಿ, ಐಷಾರಾಮಿ ವಾಹನಗಳು, ಭೂಮಿ ಮೇಲಿನ ಹೂಡಿಕೆ, ಷೇರುಗಳು ಮತ್ತು ದುಬಾರಿ ಗ್ಯಾಜೆಟ್‌ಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಬೆಂಗಳೂರು, ಮಂಡ್ಯ, ರಾಯಚೂರು, ಬೀದರ್, ಕಲಬುರಗಿ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಉಡುಪಿ, ಹಾಸನ, ಬೆಳಗಾವಿ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಿದೆ. ೧೭ ಮಂದಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ, ಪರಿಶೀಲನೆ ಹಾಗೂ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಲೋಕಾಯುಕ್ತ) ಡಾ. ಎ. ಸುಬ್ರಹ್ಮಣ್ಯೇಶ್ವರ ಅವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ನ ಆರ್.ಆರ್. ನಗರ ವಲಯಾಧಿಕಾರಿಗೆ ಸೇರಿದ ಕೆ.ಆರ್. ಪುರದಲ್ಲಿನ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿ, ಶೋಧ ನಡೆಸುತ್ತಿದ್ದಾರೆ.

ಅಗ್ನಿ ಅವಘಡದಿಂದ ಬಸ್‌ಗಳು ಆಹುತಿ

ಬೆಂಗಳೂರು, ಅ. ೩೦: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್‌ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ವರ್ಕ್ಶಾಪ್‌ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ. ಒಳಗೆ ೧೦ ಬಸ್‌ಗಳನ್ನು ನಿಲ್ಲಿಸಲಾಗಿತ್ತು. ಇವು ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್‌ಗಳಾಗಿವೆ. ಈ ಪೈಕಿ ಸದ್ಯ ಆರು ಬಸ್‌ಗಳಿಗೆ ಬೆಂಕಿ ತಗುಲಿದೆ.

ಮರಾಠ ಮೀಸಲಾತಿಗೆ ಒತ್ತಾಯ - ಶಾಸಕನ ಮನೆಗೆ ಬೆಂಕಿ

ಸಾAಭಾಜಿನಗರ, ಅ. ೩೦: ಮಹಾರಾಷ್ಟçದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ರಾಷ್ಟಿçÃಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕ ಪ್ರಕಾಶ್ ಸೋಲಂಕೆ ಅವರಿಗೆ ಸೇರಿದ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿದೆ. ಮರಾಠ ಮೀಸಲಾತಿ ಹೋರಾಟ ಮತ್ತು ಹೋರಾಟಗಾರ ಮನೋಜ್ ಜರಂಗೆ ಅವರ ಉಪವಾಸ ಸತ್ಯಾಗ್ರಹದ ಕುರಿತಂತೆ ಸೋಲಂಕೆ ನೀಡಿದ್ದಾರೆಂಬ ಅವಹೇಳನಕಾರಿ ಹೇಳಿಕೆ ಕುರಿತಾದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಆ ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಮಜಲ್‌ಗಾಂವ್‌ನ ಸೋಲಂಕೆ ನಿವಾಸದ ಬಳಿ ನಿಂತಿದ್ದ ಕಾರಿಗೂ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ.

ಮನೀಶ್ ಸಿಸೋಡಿಯಾ ಜಾಮೀನು ನಿರಾಕರಣೆ

ನವದೆಹಲಿ, ಅ. ೩೦: ರಾಷ್ಟç ರಾಜಧಾನಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬAಧಿಸಿದAತೆ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ಪೀಠವು, ಪ್ರಕರಣವನ್ನು ಉನ್ನತ ನ್ಯಾಯಾಲಯವು ವಿಶ್ಲೇಷಿಸಿದ ನಂತರ ಕೆಲವು ಅಂಶಗಳು ಅನುಮಾನಾಸ್ಪದವಾಗಿರುವುದು ಕಂಡುಬAದಿದೆ ಎಂದು ಹೇಳಿದೆ.

ಉಗ್ರನನ್ನು ಸದೆಬಡಿದ ಭಾರತೀಯ ಸೇನೆ

ಶ್ರೀನಗರ, ಅ. ೩೦: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮಾತ್ರವಲ್ಲದೇ ಈ ಕಾರ್ಯಾಚರಣೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ ಭಯೋತ್ಪಾದಕರನ್ನು ಹತ್ಯೆ ಮಾಡಿದೆ.