ಸೋಮವಾರಪೇಟೆ, ಅ. ೩೧: ಚಿತ್ರನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಇಲ್ಲಿನ ಅಪ್ಪು ಅಭಿಮಾನಿಗಳ ಸಂಘದಿAದ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಊಟದ ವ್ಯವಸ್ಥೆ ಒದಗಿಸಲಾಯಿತು. ಅಭಿಮಾನಿಗಳ ಸಂಘದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ಮತ್ತು ಪದಾಧಿಕಾರಿಗಳು, ಒಳರೋಗಿಗಳಿಗೆ ಊಟ ವಿತರಿಸಿ ಶೀಘ್ರ ಚೇತರಿಕೆಗೆ ಹಾರೈಸಿದರು.