ವೀರಾಜಪೇಟೆ, ಅ. ೩೧: ವ್ಯಕ್ತಿ ಯನ್ನು, ವ್ಯಕ್ತಿತ್ವವನ್ನು, ನಿರ್ಮಾಣ ಮಾಡುವ ಕೆಲಸ ಕ್ರೀಡೆಯಿಂದ ಮಾತ್ರ ಸಾಧ್ಯ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು.

ವೀರಾಜಪೇಟೆಯ ಪ್ರಗತಿ ಶಾಲೆಯ ಆವರಣದಲ್ಲಿ ನೂತನ ಬಾಸ್ಕೆಟ್ ಬಾಲ್ ಆಟದ ಮೈದಾನ ವನ್ನು ರಿಬ್ಬನ್ ಕತ್ತರಿಸಿ ಬಳಿಕ ಚೆಂಡನ್ನು ಎಸೆದು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯ ಕ್ರಮವನ್ನು ದ್ದೇಶಿಸಿ ಮಾತನಾಡಿದ ಅವರು ಪ್ರತಿಯೊಬ್ಬರೂ ಪಾಠದ ಜೊತೆಗೆ ಕ್ರೀಡಾ ಚಟುಚಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಶಾಲಾ ಕಾಲೇಜು ಮುಗಿದ ನಂತರ ಇತರ ಕ್ರೀಡಾ ಚಟುವಟಿಕೆಗಳಲ್ಲ್ಲಿ ಭಾಗವಹಿಸುವುದು ಕಷ್ಟಸಾಧ್ಯ. ಬಾಲ್ಯದಿಂದಲೇ ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸುವುದು ನಮ್ಮ ಆತ್ಮಸ್ಥೆöÊರ್ಯವನ್ನು ಹೆಚ್ಚಿಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅಂತರರಾಷ್ಟಿçÃಯ ಬಾಸ್ಕೇಟ್‌ಬಾಲ್ ಆಟಗಾರ್ತಿ ಮಂಡೇಪAಡ ಪುಷ್ಪ ಕುಟ್ಟಣ್ಣ ಮಾತನಾಡಿ ಮಕ್ಕಳು ಪುಸ್ತಕದ ಓದಿಗೆ ಮಾತ್ರ ಸೀಮಿತ ವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು ಎಂದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ಪ್ರಗತಿ ಶಾಲೆಯ ಸಂಸ್ಥಾಪಕರಾದ ಮಾದಂಡ ಪೂವಯ್ಯ, ವ್ಯವಸ್ಥಾಪಕರಾದ ಮಾದಂಡ ತಿಮ್ಮಯ್ಯ, ಪುರಸಭೆ ಸದಸ್ಯೆ ದೇಚಮ್ಮ ಕಾಳಪ್ಪ, ಬಾಸ್ಕೆಟ್ ಬಾಲ್ ತರಬೇತು ದಾರ ಇರ್ಷಾದ್ ಸೇರಿದಂತೆ ಇತರರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಬಾಸ್ಕೆಟ್ ಬಾಲ್ ತರಬೇತುದಾರರಾದ ಪರದಂಡ ಬೋಪಣ್ಣ, ಹಾಗೂ ಇರ್ಷಾದ್ ಅವರನ್ನು ಸನ್ಮಾನಿಸ ಲಾಯಿತು. ಈ ಸಂದರ್ಭ ಪ್ರಗತಿ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು. ಬಳಿಕ ನೂತನ ಬಾಸ್ಕೆಟ್ ಬಾಲ್ ಮೈದಾನದಲ್ಲಿ ವಿವಿಧ ತಂಡಗಳ ನಡುವೆ ಪಂದ್ಯಾಟ ನಡೆಯಿತು.