ಪೊನ್ನಂಪೇಟೆಯಲ್ಲಿ ವಾಲ್ಮೀಕಿ ಭವನ - ಎ.ಎಸ್. ಪೊನ್ನಣ್ಣ
ಪೊನ್ನಂಪೇಟೆ, ಅ. ೩೦: ಪೊನ್ನಂಪೇಟೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ಮತ್ತು ಆದಿವಾಸಿ ಭವನ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.
ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಸಹಯೋಗದಲ್ಲಿ ಪೊನ್ನಂಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪಬೆಳಗಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜದವರ ಬೇಡಿಕೆಯಂತೆ ಪೊನ್ನಂಪೇಟೆ ಭಾಗದಲ್ಲಿ ವಾಲ್ಮೀಕಿ ಭವನ ಮತ್ತು ಅದಿವಾಸಿ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕೆ ಬೇಕಾದ ಅನುದಾನ ಇದೆ. ಕಟ್ಟಡ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡುವ ಕೆಲಸ ಆಗಬೇಕಿದೆ ಎಂದರು.
ವಾಲ್ಮೀಕಿ ಮಹರ್ಷಿ ತಮ್ಮ ರಾಮಾಯಣ ಮಹಾಗ್ರಂಥದಲ್ಲಿ ಸಾರ್ವಕಾಲಿಕವಾದ ಮೌಲ್ಯಯುತ ಸಂದೇಶಗಳನ್ನು ಜಗತ್ತಿಗೆ ಸಾರಿದ್ದಾರೆ. ಶ್ರೀ ರಾಮ ಮಾದರಿ ಪುರುಷ ಎಂದು ಬರೆದಿದ್ದಾರೆ. ರಾಮಾಯಣದ ಆದರ್ಶಗಳನ್ನು ಜೀವಂತವಾಗಿರಿಸುವ ಮೂಲಕ ಮಹಾ ಪುರುಷ ವಾಲ್ಮೀಕಿಯನ್ನು ನೆನೆಸಿಕೊಳ್ಳಲು ಇಂತಹ ಜಯಂತಿ ಆಚರಣೆಯ ಕಾರ್ಯಕ್ರಮದ ಅವಶ್ಯಕತೆ ಇದೆ ಎಂದರು.
ಪೊನ್ನAಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಮಾತನಾಡಿ ಮನುಷ್ಯ ಸತ್ಯ, ನ್ಯಾಯ, ಧರ್ಮಕ್ಕೆ ಯಾವ ರೀತಿ ಗೌರವ ನೀಡಬೇಕು ಎಂಬುದನ್ನು ವಾಲ್ಮೀಕಿ ಮಹರ್ಷಿ ರಾಮಾಯಣದಲ್ಲಿ ಹೇಳಿದ್ದಾರೆ. ವಾಲ್ಮೀಕಿ ಅವರ ಎಲ್ಲಾ ವಿಚಾರಗಳನ್ನು ಜನತೆ ಪಾಲಿಸಿದರೆ ದೇಶ ಉನ್ನತಿ ಸಾಧಿಸಲು ಸಾಧ್ಯವಿದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ.ಮಹದೇವ್ ಅತ್ನಿ ಮಾತನಾಡಿ ಬೇಡ ಜನಾಂಗದ ವಾಲ್ಮೀಕಿ ರಚಿಸಿದ ೨೪ ಸಾವಿರ ಶ್ಲೋಕಗಳಿರುವ ಮೂಲ ರಾಮಾಯಣವನ್ನು ಓದಬೇಕು, ಗೌರವಿಸಬೇಕು, ಅದರಲ್ಲಿರುವ ಆದರ್ಶಗಳನ್ನು ಪಾಲಿಸಬೇಕು ಎಂದರು.
ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎ.ಎಂ. ನವೀನ್ ಕುಮಾರ್ ಮಾತನಾಡಿ, ವಾಲ್ಮೀಕಿ ಯಾವುದೇ ಒಂದು ಜನಾಂಗಕ್ಕೆ ಸೀಮಿತವಾದವರಲ್ಲ, ರಾಮಾಯಣದ ಪಾತ್ರಗಳ ಮೂಲಕ ವಾಲ್ಮೀಕಿ ಮಹರ್ಷಿ ಉತ್ತಮ ಆಡಳಿತ, ಸಾಮಾಜಿಕ ಜವಾಬ್ದಾರಿ, ಸಂಬAಧ, ಸಹೋದರತ್ವದ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದರು.
ಪೊನ್ನAಪೇಟೆ, ವೀರಾಜಪೇಟೆ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಟಿ.ಸುರೇಶ್ ಮಾತನಾಡಿ ಪೊನ್ನಂಪೇಟೆಯಲ್ಲಿ ವಾಲ್ಮೀಕಿ ಭವನ ಮತ್ತು ವೀರಾಜಪೇಟೆಯಲ್ಲಿ ವಾಲ್ಮೀಕಿ ಜನಾಂಗ ಸ್ಮಶಾನಕ್ಕೆ ಸ್ಥಳ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿಕೊಂಡರು.
ಇದೇ ಸಂದರ್ಭ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಈ ಸಂದರ್ಭ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ಪೊನ್ನಂಪೇಟೆ ಪೊಲೀಸ್ ರಾಣಾಧಿಕಾರಿ ನವೀನ್, ತಾಲೂಕು ಎಸ್ ಸಿ, ಎಸ್ ಟಿ ನೌಕರರ ಸಮನ್ವಯ ಸಮಿತಿಯ ಟಿ.ಎಸ್. ಮಹೇಶ್, ಮಾಜಿ ಜಿ.ಪಂ. ಸದಸ್ಯೆ ಪಂಕಜ, ತಿತಿಮತಿ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಣಿಕುಂಞ, ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತುರಾಜ್, ವಿವಿಧ ಹಾಡಿ ಮುಖಂಡರಾದ ಸುಬ್ರು, ಸಿದ್ದ, ರಘು, ಗಪ್ಪು, ಪುಷ್ಪ, ರಾಮು, ಸಿ ಆರ್ ಪಿ ತಿರುನೆಲ್ಲಿಮಾಡ ಜೀವನ್, ಆಶ್ರಮ ಶಾಲೆಯ ಶಿಕ್ಷಕರು, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಇದ್ದರು. ಶಿಕ್ಷಕಿ ಮಂಗಳ ಪ್ರಾರ್ಥಿಸಿ, ಸಿದ್ದಲಿಂಗಶೆಟ್ಟಿ ಸ್ವಾಗತಿಸಿ, ಬೊಮ್ಮಾಡು ಆಶ್ರಮ ಶಾಲೆ ಮುಖ್ಯ ಶಿಕ್ಷಕ ಪ್ರಶಾಂತ್ ನಿರೂಪಿಸಿದರು. ಬಸವರಾಜು ವಂದಿಸಿದರು.
ಮೆರವಣಿಗೆ
ಸಭಾ ಕಾರ್ಯಕ್ರಮಕ್ಕೂ ಮುನ್ನ ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನ ಮುಂಭಾಗದಿAದ ವಾಲ್ಮೀಕಿ ಭಾವಚಿತ್ರವನ್ನು ವಾಹನದಲ್ಲಿರಿಸಿ ತಮಟೆ, ನಗಾರಿಯೊಂದಿಗೆ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಯಿತು.
ಮೆರವಣಿಗೆಗೆ ತಹಶೀಲ್ದಾರ್ ಪ್ರಶಾಂತ್ ಚಾಲನೆ ನೀಡಿದರು. ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಸೇರಿದಂತೆ ಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕೂಡಿಗೆ : ಕುಶಾಲನಗರ ತಾಲೂಕು ಪಂಚಾಯಿತಿ ಸೋಮವಾರಪೇಟೆ ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಕುಶಾಲನಗರ ಸಮೀಪದ ಮುಳ್ಳುಸೋಗೆಯಲ್ಲಿರುವ ವಾಲ್ಮೀಕಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಬಹು ಮುಖ್ಯವಾಗಿರುತ್ತದೆ. ಅದರೊಂದಿಗೆ ಸಂಸ್ಕೃತಿ, ಸಂಪ್ರದಾಯವನ್ನು ಬೆಳೆಸಿಕೊಂಡು ಹೋಗಿ ಉತ್ತಮ ಪ್ರಜೆಗಳಾಗಲು ಅನುಕೂಲವಾಗುತ್ತದೆ ಎಂದರು.
ಕುಶಾಲನಗರದಲ್ಲಿರುವ ವಾಲ್ಮೀಕಿ ಭವನದ ಬಳಕೆಯ ಬಗ್ಗೆ ಜಿಲ್ಲಾ ವಾಲ್ಮೀಕಿ ನಾಯಕ ಸಮುದಾಯ ದವರು ಅಧಿಕಾರಿ ವರ್ಗದವರು ಸಭೆ ಸೇರಿ ತೀರ್ಮಾನ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಕನ್ನಡ ಅಧ್ಯಾಪಕರಾದ ಮೆ.ನಾ. ವೆಂಕಟನಾಯ್ಕ ಮಹರ್ಷಿ ವಾಲ್ಮೀಕಿ ಜಯಂತಿ ಬಗ್ಗೆ ಮಾಹಿತಿ ನೀಡಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ, ವಿವಿಧ ಸಂಘಟನೆಯ ಪ್ರಮುಖರಾದ ಸಿದ್ದಪ್ಪ ಮತ್ತಿತರರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಬಿ.ವಿ. ಜಯಣ್ಣ. ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಜಿಲ್ಲಾ ವಾಲ್ಮೀಕಿ ಸಂಘದ ಕಾರ್ಯದರ್ಶಿ ವೈ.ಟಿ. ಪರಮೇಶ್, ರಾಜ್ಯ ವಾಲ್ಮೀಕಿ ಯುವ ಘಟಕದ ಅಧ್ಯಕ್ಷ ಚಂದನ್, ಕೂಡುಮಂಗಳೂರು ವೆಂಕಟೇಶ್, ಹೊನ್ನಪ್ಪ, ಜಯಪ್ಪ ಹಾನಗಲ್, ಶಿವಸಿದ್ದಪ್ಪ, ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಸೇರಿದಂತೆ ವಿವಿಧ ಸಮಾಜದ ಮುಖಂಡರು ಮತ್ತು ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಶಿಕ್ಷಕಿ ಹೇಮಾಲತಾ ನಿರೂಪಿಸಿ, ಸಿದ್ದೇಗೌಡ ಸ್ವಾಗತಿಸಿ, ವಂದಿಸಿದರು.
ಕಣಿವೆ : ಮಹರ್ಷಿ ವಾಲ್ಮೀಕಿ ಅವರ ಬದುಕಿನ ಚಿತ್ರಣ ಎಲ್ಲರ ಜೀವನದಲ್ಲೂ ಹೊಸ ಪರಿವರ್ತನೆ ತರಲಿದೆ ಎಂದು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಸಹಾಯಕ ಪ್ರಾಧ್ಯಾಪಕ ರಮೇಶ್ ಚಂದ್ರ ಹೇಳಿದರು.
ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ರಚಿಸಿದ ರಾಮಾಯಣ ಮಾನವ ಜೀವನದ ಮಾನಸಿಕತೆಯನ್ನೇ ಬದಲಾಯಿಸುತ್ತದೆ. ಜನರಲ್ಲಿ ಮಾತೃ ಪ್ರೀತಿ, ಸಹೋದರತ್ವ ಬಾಂಧವ್ಯ ಹಾಗೂ ಇನ್ನಿತರ ಜೀವನ ಮೌಲ್ಯಗಳನ್ನು ಸಕಾರಾತ್ಮಕ ಗೊಳಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಬಿ.ಎಂ.ಪ್ರವೀಣ್ ಕುಮಾರ್ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಸುನಿಲ್ ಕುಮಾರ್, ಸುಧಾಕರ್, ವಂದನ, ಕುಸುಮ, ರಶ್ಮಿ, ಉಪನ್ಯಾಸಕರುಗಳಾದ ಮನೋಜ್, ಚರಣ್ ರಾಜ್, ಪುನೀತ್ ಇದ್ದರು.
ಮಡಿಕೇರಿ: ರಾಮಾಯಣದ ಅಧ್ಯಯನ ಹಾಗೂ ಅದರಲ್ಲಿರುವ ತತ್ವಗಳ ಅಳವಡಿಕೆಯಿಂದ ಸಮಾಜದ ಸುಧಾರಣೆ ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥ ಬಿ.ಹೆಚ್. ತಳವಾರ್ ಅಭಿಪ್ರಾಯಪಟ್ಟರು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಆದಿಕವಿ ಮಹರ್ಷಿ ವಾಲ್ಮೀಕಿ ಮತ್ತು ಅವರ ವಿರಚಿತ ರಾಮಾಯಣದ ಪ್ರಸ್ತುತೆಯ ಬಗ್ಗೆ ಸಮಗ್ರವಾಗಿ ವಿವರಿಸಿದರು.
ಭಾರತದಾದ್ಯಂತ ಪ್ರತಿವರ್ಷ ಸೀಗೆ ಹುಣ್ಣಿಮೆಯಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ, ಭಾರತೀಯ ಸಂಸ್ಕöÈತಿಗೆ ಆದಿಕವಿಯ ಮಹಾನ್ ರಾಮಾಯಣ ಗ್ರಂಥವೇ ಆಧಾರ ಎಂದು ಅಭಿಪ್ರಾಯಪಟ್ಟರು.
ಇಂಗ್ಲೀಷ್ ಸಹ ಪ್ರಾಧ್ಯಾಪಕಿ ಡಾ.ನಯನಾ ಕಶ್ಯಪ್ ಮಾತನಾಡಿ, ರಾಮಾಯಣದಲ್ಲಿ ರಾಮನ ಪಾತ್ರವನ್ನು ಮಹರ್ಷಿ ವಾಲ್ಮೀಕಿ ಅದ್ಭುತವಾಗಿ ಚಿತ್ರಿಸಿದ್ದಾರೆ, ರಾಮ ಎಂದರೆ ಒಂದು ಜೀವನ ತತ್ವ ಮತ್ತು ಜೀವನ ಕ್ರಮ, ರಾಮನ ಪೂರ್ವಭಾಷಿಕ ಗುಣ ಆದರ್ಶವಾದದ್ದು ಎಂದರು.
ಅರ್ಥಶಾಸ್ತç ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ ಮಾತನಾಡಿ, ಬೇಟೆಗಾರನಾಗಿದ್ದವನ ಬದುಕು ನಾರದನೆಂಬ ಗುರುವಿನ ಮಾರ್ಗದರ್ಶನದಿಂದ ಪರಿವರ್ತನೆ ಗೊಂಡು ಅದ್ಭುತವಾದ ರಾಮಾಯಣ ರಚಿಸುವ ವಾಲ್ಮೀಕಿಯಾದದ್ದು, ಆತುರದಲ್ಲಿ ಭಾವೋದ್ವೇಗದಲ್ಲಿ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬಾರದೆಂಬ ಸಂದೇಶ ರಾಮಾಯಣದಿಂದ ತಿಳಿದು ಬರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೇಜರ್ ಪ್ರೊ. ಬಿ.ರಾಘವ, ನಮ್ಮ ಬದುಕು ಆಧುನಿಕತೆಗೆ ಒಗ್ಗಿಕೊಳ್ಳುತ್ತಿದೆ. ಅದರೊಂದಿಗೆ ನಮ್ಮ ಸಂಸ್ಕöÈತಿ, ಆಚಾರ ವಿಚಾರಗಳು ಮರೆಯಾಗಬಾರದು, ನಮ್ಮ ಮುಂದಿನ ಪೀಳಿಗೆಯ ಜೀವನ ಉತ್ತಮ ರೀತಿಯಲ್ಲಿ ಸಾಗಬೇಕಾದರೆ ಆದಿಕವಿ ಮಹರ್ಷಿ ವಾಲ್ಮೀಕಿಯಂತಹ ಮಹಾನ್ ವ್ಯಕ್ತಿಗಳ ವಿಚಾರಧಾರೆಯನ್ನು ಅಧ್ಯಯನ ಮಾಡಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರು ಹಾಗೂ ಗಣಿತಶಾಸ್ತç ಮುಖ್ಯಸ್ಥ ಡಾ. ಆರ್.ರಾಜೇಂದ್ರ ಸ್ವಾಗತಿಸಿದರು, ವಿದ್ಯಾರ್ಥಿನಿಯರಾದ ಸಿ.ಎಂ.ಸAಜನಾ, ಸಿ.ಎಂ.ಯೋಗಿನಿ ಪ್ರಾರ್ಥಿಸಿದರು, ಗಣಕಶಾಸ್ತç ಸಹಪ್ರಾಧ್ಯಾಪಕ ಎಂ.ಎನ್ ರವಿಶಂಕರ್ ನಿರೂಪಿಸಿ ವಂದಿಸಿದರು.ಚೆಯ್ಯAಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಶಿಕ್ಷಕಿ ಜಯಪ್ರದ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಮುಖ್ಯ ಶಿಕ್ಷಕಿ ಎಚ್.ಆರ್.ಪ್ರೇಮ ಕುಮಾರಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಚೆಯ್ಯಂಡಾಣೆ: ಸ್ಥಳೀಯ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಲೀಲಾವತಿ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಮದೆನಾಡು ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಳಿಕಟ್ಟೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಕೆ.ಕೆ. ಬಾಲಕೃಷ್ಣ. ಎಸ್.ಡಿ.ಎಂ.ಸಿ ಅಧ್ಯಕ್ಷ ಪಿ.ಯು. ಸುಂದರ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.ವೀರಾಜಪೇಟೆ: ಸೈಂಟ್ ಆ್ಯನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ಹಾಗೂ ಇತರ ಭಾಷಾ ವಿಭಾಗದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೈಂಟ್ ಆ್ಯನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಹೇಮ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಗತ್ಯತೆಯ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಪ್ರತಿಮಾ ರೈ ಪ್ರಾಸ್ತಾವಿಕ ನುಡಿಯಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಅರ್ಜುನ್ ಮೌರ್ಯ ವಾಲ್ಮೀಕಿ ಜೀವನ ಹಿನ್ನೆಲೆ ಹಾಗೂ ಭಾರತೀಯ ಸಾಹಿತ್ಯಕ್ಕೆ ಅವರ ಕೊಡುಗೆ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಬೀನ ರೋಸಿ ಉಪಸ್ಥಿತರಿದ್ದರು. ಕನ್ನಡ ವಿದ್ಯಾರ್ಥಿ ವೇದಿಕೆಯಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಬೀನ ರೋಸಿ ಉಪಸ್ಥಿತರಿದ್ದರು