ಮಡಿಕೇರಿ, ನ. ೧ : ರಾಜ್ಯಗಳ ಮರು-ಸಂಘಟನಾ ಕಾಯಿದೆ ೧೯೫೬ ರ ಒಪ್ಪಂದಗಳಿಗೆ ಕರ್ನಾಟಕ ರಾಜ್ಯ ಬದ್ಧವಾಗಿಲ್ಲ, ಇದರಿಂದ ಕೊಡವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು.

ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ ೨ನೇ ರಾಜ್ಯ ಮರು ಸಂಘÀಟನೆ ಆಯೋಗ ರಚಿಸಬೇಕೆಂದು ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಒತ್ತಾಯಿಸಿದರು.

ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ೯ ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ ಅವರು ಖ್ಯಾತ ಅರ್ಥಶಾಸ್ತçಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿ ಕೊಡವ ಲ್ಯಾಂಡ್ ಪರವಾಗಿ ಆಯೋಗವನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷö್ಮ ಬುಡಕಟ್ಟು ಜನಾಂಗವಾಗಿರುವ ಕೊಡವರಿಗೆ ಸಾಂವಿಧಾನಿಕ ಭದ್ರತೆ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಕಲಿಯಂಡ ಪ್ರಕಾಶ್, ಕಲಿಯಂಡ ಮೀನಾ ಪ್ರಕಾಶ್, ಬೊಟ್ಟಂಗಡ ಸವಿತ ಗಿರೀಶ್, ಲೆ.ಕ. ಬಿ.ಎಂ. ಪಾರ್ವತಿ, ಪಟ್ಟಮಾಡ ಲಲಿತ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಕೂಪದಿರ ಪುಷ್ಪ ಮುತ್ತಣ್ಣ, ಚಂಬAಡ ಜನತ್, ಅರೆಯಡ ಗಿರೀಶ್, ಕಾಂಡೆರ ಸುರೇಶ್, ಬೇಪಡಿಯಂಡ ದಿನು, ಬೊಟ್ಟಂಗಡ ಗಿರೀಶ್, ಕಿರಿಯಮಾಡ ಶರೀನ್, ಅಪ್ಪಿಯಂಗಡ ಮಾಲೆ, ಬೊಟ್ಟಂಗಡ ದೇವಯ್ಯ, ಮುದ್ದಂಡ ಗಪ್ಪು, ಚಂಙAಡ ಚಾಮಿ, ಬೇಪಡಿಯಂಡ ಬಿದ್ದಪ್ಪ, ಪುಲ್ಲೇರ ಕಾಳಪ್ಪ, ನಂದಿನೆರವAಡ ವಿಜು, ಕೂಪದಿರ ಸಾಬು, ಪಾರುವಂಗಡ ನವೀನ್, ಮಂದಪAಡ ಮನೋಜ್, ಮಣವಟ್ಟಿರ ಚಿಣ್ಣಪ್ಪ, ಪುಟ್ಟಿಚಂಡ ಡಾನ್ ದೇವಯ್ಯ, ಚೋಳಪಂಡ ನಾಣಯ್ಯ, ಮೇದುರ ಕಂಠಿ, ನಂದಿನೆರವAಡ ಅಯ್ಯಣ್ಣ, ನಂದಿನೆರವAಡ ಅಪ್ಪಯ್ಯ, ಅಜ್ಜಿನಿಕಂಡ ಸನ್ನಿ ಮಾಚಯ್ಯ ಮತ್ತಿತರರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಕೊಡವ ಲ್ಯಾಂಡ್‌ಗಾಗಿ ಒತ್ತಾಯಿಸಿದರು.