ಮಡಿಕೇರಿ, ನ. ೧ : ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಕೋಟೆ ಆವರಣದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕಕ್ಕೆ ಹಿತರಕ್ಷಣಾ ವೇದಿಕೆ ಸದಸ್ಯರುಗಳು ಹಾಗೂ ವಿವಿಧ ಸಂಘಟನೆಯ ಅಧ್ಯಕ್ಷರುಗಳು ಪುಷ್ಪ ನಮನ ಸಲ್ಲಿಸಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ. ಖಲೀಲ್ ಭಾಷಾ. ವಿಷ್ಣುಸೇನೆ ಜಿಲ್ಲಾಧ್ಯಕ್ಷ ರಫೀಕ್ (ದಾದಾ). ವೀರಭದ್ರ ಮುನೇಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ. ಮಂಜುನಾಥ್. ಫೀಲ್ಡ್ ಮಾರ್ಷಲ್ ಜನರಲ್ ಕೆ.ಎಂ. ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್. ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರುಗಳಾದ ಪುನೀತ್ ಜಿ. ಎನ್. ಹಾಗೂ ಆದರ್ಶ್ ಹಲವರು ಪಾಲ್ಗೊಂಡಿದ್ದರು.