ಕೂಡಿಗೆ, ನ. ೧ : ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾ. ಪಂ. ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮ ದಲ್ಲಿರುವ ಆನೆಕೆರೆಯಲ್ಲಿ ನೀರಿನ ಸಂಗ್ರಹದ ಮಟ್ಟ ಹೆಚ್ಚಿಸುವ ಉದ್ದೇ ಶದಿಂದ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಹೂಳು ಎತ್ತುವ ಕಾಮಗಾರಿಯನ್ನು ಕೈಗೊಳ್ಳುವಂತೆ ಹಾಜರಿದ್ದ ಸದಸ್ಯರು ತೀರ್ಮಾನ ಕೈಗೊಂಡಿರು.

ಸಭೆಯಲ್ಲಿ ಗ್ರಾಮ ಪಂZಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ಕುಡಿಯುವ ನೀರಿನ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು, ಶುಚಿತ್ಚಕ್ಕೆ ಹೆಚ್ಚಿನ ಆದ್ಯತೆ ನೀಡುವ ವಿಷಯಗಳ ಬಗ್ಗೆ ಸುಧೀರ್ಘ ಚರ್ಚೆಗಳು ನಡೆದವು.

ಹಾಲಿ ಇರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಮುಂದಿನ ದಿನಗಳಲ್ಲಿ ರಸ್ತೆಯ ಅಗಲೀಕರಣ ಮಾಡುವ ಸಂದರ್ಭದಲ್ಲಿ ನೆಲಸಮ ಮಾಡಬೇಕಿರುವ ಹಿನ್ನೆಲೆ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಟ್ಟಲು ಸ್ಥಳದ ಅವಕಾಶ ಬೇಕಿರುವ ಕಾರಣ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಭೇಟಿಯಾ ಗುವ ಬಗ್ಗೆ ಚರ್ಚೆಗಳು ನಡೆದವು.

ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಸವಿಸ್ತಾರವಾದ ಚರ್ಚೆಗಳು ನಡೆದವು. ಮುಂದಿನ ದಿನಗಳಲ್ಲಿ ಆಯಾ ವಾರ್ಡ್ಗಳಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಭಾಸ್ಕರ್ ನಾಯಕ್ ಮಾತನಾಡುತ್ತಾ ಸಭೆಯಲ್ಲಿ ಚರ್ಚಿ ಸಿದ ವಿಷಯಗಳನ್ನು ಈಗಾಗಲೇ ಲಿಖಿತವಾಗಿ ಪುಸ್ತಕದಲ್ಲಿ ದಾಖಲೆ ಮಾಡಲಾಗಿದೆ. ಅದರನ್ವಯ ಹಂತ ಹಂತವಾಗಿ ಎಲ್ಲಾ ವಾರ್ಡ್ಗಳ ಮೂಲಭೂತ ಸೌಕರ್ಯಗಳನ್ನು, ವಿವಿಧ ಕಾಮಗಾರಿಗಳನ್ನು ಪೂರ್ಣ ಗೊಳಿಸಲು ಕ್ರಮವನ್ನು ವಹಿಸಲಾಗು ವುದು. ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ಸದಸ್ಯರ ಸಹಕಾರ ಮುಖ್ಯ ಎಂದರು. ಸಭೆಯಲ್ಲಿ ಉಪಾ ಧ್ಯಕ್ಷೆ ಶಶಿಕಲಾ, ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಜರಿದ್ದರು.