೬೮ ಸಾಧಕರು, ೧೦ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು, ಅ. ೩೧: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೬೮ ಸಾಧಕರು ಹಾಗೂ ೧೦ ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಮಂಗಳವಾರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು, ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಸೇರಿದಂತೆ ೬೮ ಸಾಧಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ. ಶಿವಮೊಗ್ಗದ ಕರ್ನಾಟಕ ಸಂಘ, ಬೆಂಗಳೂರಿನ ಮಿಥಿಕ್ ಸೊಸೈಟಿ, ದಾವಣಗೆರೆಯ ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ ಸೇರಿದಂತೆ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿ ಪಡೆದವರಿಗೆ ೭೫ ಲಕ್ಷ ನಗದು ಹಾಗೂ ೨೫ ಗ್ರಾಂ ಚಿನ್ನದ ಪದಕವನ್ನು ಸರ್ಕಾರ ಘೋಷಿಸಿದೆ.
ಹತ್ಯೆಯಾದ ಇಸ್ರೇಲ್ ಮೇಲಿನ ದಾಳಿ ರೂವಾರಿ
ಟೆಲ್ ಅವೀವ್, ಅ. ೩೧: ಹಮಾಸ್ ಉಗ್ರ ಸಂಘಟನೆಯನ್ನು ಕಿತ್ತೊಗೆಯುವ ಶಪಥ ಮಾಡಿರುವ ಇಸ್ರೇಲ್ ಸೇನೆ ಗಾಜಾ ಪಟ್ಟಿ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಗಾಜಾಪಟ್ಟಿಯೊಳಗೆ ನುಗ್ಗಿರುವ ಐಡಿಎಫ್ ಸಾಮಾಜಿಕ ಪೋಸ್ಟ್ನಲ್ಲಿ ಹಮಾಸ್ ಭಯೋತ್ಪಾದಕನ ಹತ್ಯೆ ಮಾಡಲಾಗಿದ್ದು ಆತನ ಹೆಸರು ಮತ್ತು ಫೋಟೋವನ್ನು ಹಂಚಿಕೊAಡಿದೆ. ಗುಪ್ತಚರ ಆಧಾರದ ಮೇಲೆ, ಯುದ್ಧ ವಿಮಾನಗಳು ಉಗ್ರರ ಅಡಗುತಾಣದ ಮೇಲೆ ದಾಳಿ ಮಾಡುತ್ತಿದೆ. ಈ ದಾಳಿಯಲ್ಲಿ ಉತ್ತರ ವಿಭಾಗದ ಬೀಟ್ ಲಾಹಿಯಾ ಬೆಟಾಲಿಯನ್ನ ನಸೀಮ್ ಅಬು ಅಜಿನಾ ಹತ್ಯೆಯಾಗಿದ್ದಾನೆ ಎಂದು ಹೇಳಲಾಗುತ್ತದೆ. ಹತ್ಯೆಗೀಡಾದ ಭಯೋತ್ಪಾದಕ ಹಮಾಸ್ನ ಹಿರಿಯ ಕಮಾಂಡರ್ ಎಂದು ಇಸ್ರೇಲಿ ರಕ್ಷಣಾ ಪಡೆ ಹೇಳಿಕೊಂಡಿದೆ. ಕಿಬ್ಬುಟ್ಜ್ ಸೇರಿದಂತೆ ಮೋಶವ್ ನೆಟೀವ್ ಹಠಾರಾ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದನು.
ಐಫೋನ್ ಮಾಹಿತಿ ಕದಿಯುವ ಯತ್ನ-ತನಿಖೆಗೆ ಆದೇಶ
ನವದೆಹಲಿ, ಅ. ೩೧: ಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್ ಕಂಪೆನಿಯಿAದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿದ ನಂತರ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಐಟಿ ಸಚಿವ ಅಶ್ವಿನಿ ವೈಷ್ಣವ್, ದೇಶದ ಎಲ್ಲಾ ನಾಗರಿಕರ ಗೌಪ್ಯತೆ ಮತ್ತು ಭದ್ರತೆಯನ್ನು ರಕ್ಷಿಸುವಲ್ಲಿ ಸರ್ಕಾರವು ಬದ್ಧವಾಗಿದೆ. ಈ ವಿಚಾರವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಈ ಎಚ್ಚರಿಕೆ ಸಂದೇಶಗಳಿಗೆ ಸಂಬAಧಿ ಸಿದಂತೆ ಪರಿಸ್ಥಿತಿಯನ್ನು ಕೂಲಂಕಷವಾಗಿ ಅರ್ಥಮಾಡಿಕೊಳ್ಳಲು ಮತ್ತು ಪರಿಹರಿಸಲು ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ. ರಾಜ್ಯ ಪ್ರಾಯೋಜಿತ ದಾಳಿಗಳ ಬಗ್ಗೆ ಮಾಹಿತಿ ಮತ್ತು ವ್ಯಾಪಕವಾದ ವದಂತಿಗಳ ಬೆನ್ನಲ್ಲೇ, ಆಪಾದಿತ ಆರೋಪಗಳ ಮೇಲಿನ ತನಿಖೆಯಲ್ಲಿ ಸಕ್ರಿಯವಾಗಿ ಭಾಗ ವಹಿಸಲು ನಾವು ಕಂಪೆನಿಯನ್ನು ಕೇಳಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ
ನವದೆಹಲಿ, ಅ. ೩೧: ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಕಳೆದ ವಾರ ಕೆ.ಜಿ. ರೂ. ೪೦-೫೦ ಇದ್ದ ಈರುಳ್ಳಿ ಈಗ ರೂ. ೧೦೦ ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ. ಕರ್ನಾಟಕದಲ್ಲಿಯೂ ಕೂಡಾ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಈರುಳ್ಳಿ ಬೆಲೆ ಹೆಚ್ಚಳಕ್ಕೆ ಉತ್ತರ ಕರ್ನಾಟಕ ಪ್ರದೇಶದಲ್ಲಿನ ತೀವ್ರ ಬರ-ತರಹದ ಪರಿಸ್ಥಿತಿಗಳು ಕಾರಣವೆಂದು ಹೇಳಲಾಗುತ್ತಿದೆ. ಹಾಪ್ಕಾಮ್ಸ್ನಲ್ಲಿ ಕಳೆದ ವಾರ ರೂ. ೫೦-೬೦ಗೆ ಕೆಜಿ ಈರುಳ್ಳಿ ಸಿಗುತ್ತಿತ್ತು. ಈಗ ರೂ. ೯೦ ಆಗಿದೆ. ದುಬಾರಿ ಬೆಲೆಯಿಂದಾಗಿ ತರಕಾರಿ ಅಂಗಡಿಗಳಲ್ಲಿ ಈರುಳ್ಳಿ ದೊರೆಯದಂತಾಗಿದ್ದು, ಈರುಳ್ಳಿಗೆ ಬೇಡಿಕೆ ಹೆಚ್ಚಿರುವುದರಿಂದ ಇನ್ನೂ ಕೆಲವು ದಿನಗಳ ಕಾಲ ಬೆಲೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಂಗಡಿಯವರು ಹೇಳುತ್ತಾರೆ.
೫೩ ದಿನಗಳ ಬಳಿಕ ಚಂದ್ರಬಾಬು ನಾಯ್ಡು ಬಿಡುಗಡೆ
ರಾಜಮಹೇಂದ್ರವರA, ಅ. ೩೧: ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಇಲ್ಲಿನ ಕೇಂದ್ರ ಕಾರಾಗೃಹದಿಂದ ಮಂಗಳವಾರ ಬಿಡುಗಡೆಗೊಂಡರು. ೫೩ ದಿನಗಳ ಜೈಲುವಾಸ ಮುಗಿಸಿದ ಅವರು ಸಂಜೆ ೪.೨೦ಕ್ಕೆ ಜೈಲಿನಿಂದ ಹೊರಗೆ ಬಂದರು. ಕುಟುಂಬಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ನಾಯ್ಡು ಅವರನ್ನು ಬರಮಾಡಿಕೊಂಡರು. ಜೈಲಿನಿಂದ ಹೊರಬಂದು ಹಿಂದೂಪುರ ಶಾಸಕರೂ ಆಗಿರುವ ಸೋದರ ಸಂಬAಧಿ ಎನ್. ಬಾಲಕೃಷ್ಣ, ಸೊಸೆ ನಾರಾ ಬ್ರಹ್ಮಣಿ ಅವರನ್ನು ಭೇಟಿ ಮಾಡಿದರು. ಟಿಡಿಪಿ ರಾಜ್ಯಾಧ್ಯಕ್ಷ ಕೆ. ಅಚೆನ್ ನಾಯ್ಡು ಅವರನ್ನು ಆಲಿಂಗಿಸಿ, ಸಂತೋಷ ವ್ಯಕ್ತಪಡಿಸಿದರು. ಜೈಲಿನ ಹೊರಗೆ ಸೇರಿದ್ದ ಸಾವಿರಾರು ಕಾರ್ಯಕರ್ತರು, ಟಿಡಿಪಿ ಧ್ವಜವನ್ನು ಹಾರಿಸುವ ಮೂಲಕ ನಾಯ್ಡು ಅವರಿಗೆ ಸ್ವಾಗತ ಕೋರಿದರು.
‘ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ’
ಮಂಡ್ಯ ಅ ೩೧: ಕಾಗೆ ಚರ್ಚೆಗಳಿಂದ, ಮೌಡ್ಯ ಬಿತ್ತುವ ಕಾರ್ಯ ಕ್ರಮಗಳಿಂದ ಜನರಿಗೆ ಏನು ಪ್ರಯೋಜನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರನ್ನು ಪ್ರಶ್ನಿಸಿದರು. ಶ್ರೀಕ್ಷೇತ್ರ ಆದಿ ಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು ? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣ ಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂತಹ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ಗಳು ಮಾಡಬಾರದು ಎಂದರು.