ಪೊನ್ನಂಪೇಟೆ, ನ. ೧: ಕರ್ನಾಟಕ ಹಾಗೂ ಕನ್ನಡ ಭಾಷೆಯ ಅಭಿವೃದ್ಧಿಗೆ ಕೊಡಗಿನ ಜನ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು. ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ಪೊನ್ನಂಪೇಟೆ ತಾಲೂಕು ಆಡಳಿತ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯವಾಗಿದ್ದ ಕೊಡಗು, ಭಾಷಾವಾರು ರಾಜ್ಯ ವಿಂಗಡಣೆ ಸಂದರ್ಭ ಕರ್ನಾಟಕದೊಂದಿಗೆ ವಿಲೀನವಾಯಿತು. ಈ ಸಂದರ್ಭ ಕೊಡಗಿನ ಜನ ನಾವು ಬೇರೆ ರಾಜ್ಯದಿಂದ ಬಂದಿದ್ದೇವೆ ಎಂದು ಭಾವಿಸದೆ ಕರ್ನಾಟಕದೊಂದಿಗೆ ಬೆರೆತು ಈ ನಾಡಿನ ಸಂಸ್ಕೃತಿಗೆ, ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕರ್ನಾ ಟಕ ಸರ್ಕಾರ ಕನ್ನಡ ನಾಡು ನುಡಿ, ಸಂಸ್ಕೃತಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಹಲವಾರು ಕಾರ್ಯ ಕ್ರಮಗಳ ಮೂಲಕ ಕನ್ನಡ ಬೆಳವಣಿಗೆಗೆ ಶ್ರಮಿಸುತ್ತಿದೆ. ಕನ್ನಡಿಗರಾದ ನಾವು ನಮ್ಮ ಕನ್ನಡ ಭಾಷೆಯ ಮೇಲೆ ಪ್ರೀತಿಯನ್ನು ಹೊಂದಿರಬೇಕು. ಭಾಷೆಯ ಬೆಳವಣಿಗೆಗೆ ಶ್ರಮಿಸಬೇಕು. ಆದರೆ, ನಮ್ಮ ಭಾಷೆಯ ಮೇಲಿನ ಪ್ರೇಮ ಇನ್ನೊಂದು ಭಾಷೆಯ ಮೇಲೆ ದ್ವೇಷವಾಗಿ ಬದಲಾಗಬಾರದು. ಸರ್ವ ಜನಾಂಗದ ಶಾಂತಿಯ ತೋಟದಂತಿರುವ ನಮ್ಮ ಕರ್ನಾಟಕದಲ್ಲಿ ನಮ್ಮ ಭಾಷೆಯ ಮೇಲೆ ಅಭಿಮಾನವನ್ನು ಇಟ್ಟುಕೊಂಡು, ಬೇರೆ ಭಾಷೆಯವರಿಗೂ ಕನ್ನಡ ಕಲಿಸುವ ಪ್ರಯತ್ನ ಮಾಡಬೇಕು. ಬೇರೆ ಭಾಷೆಯರಿಗೆ ನಮ್ಮ ಸಂಸ್ಕೃ ತಿಯ ಬಗ್ಗೆ ಅರಿವು ಮೂಡಿಸಬೇಕು, ಸರ್ವರೂ ಜೊತೆಗೂಡಿ ಸಹಬಾಳ್ವೆ ಯಿಂದ ಬದುಕು ಸಾಗಿಸಬೇಕು ಎಂದರು. ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಮಾತ ನಾಡಿ, ಕನ್ನಡದ ಮೇಲಿನ ನಮ್ಮ ಕಾಳಜಿ ಕೇವಲ ನವೆÀಂಬರ್ ತಿಂಗಳಿಗೆ ಮಾತ್ರ ಸೀಮಿತವಾಗ ಬಾರದು. ವರ್ಷಪೂರ್ತಿ ಕನ್ನಡದ ಅಭಿವೃದ್ಧಿಗೆ ಕಂಕಣಬದ್ಧರಾಗಿ ರಬೇಕು. ಪೋಷಕರು ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಕನ್ನಡ ಕಲಿಸುವ ಮೂಲಕ ಕನ್ನಡದ ಮೇಲೆ ಅಭಿ ಮಾನ ಮೂಡಿಸಬೇಕು ಎಂದರು.

ಕನ್ನಡ ಭಾಷಾ ಶಿಕ್ಷಕಿ ನಳಿನಿ ಕರ್ನಾಟಕದ ಇತಿಹಾಸದ ಬಗ್ಗೆ, ಕನ್ನಡ ಭಾಷೆ ಬೆಳೆದು ಬಂದ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಶಾಲೆಯ ಶಿಕ್ಷಕರು ರೈತ ಗೀತೆ ಹಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಎಲ್ಲಾದರೂ ಇರು ಎಂತಾದರೂ ಇರು, ಒಂದೇ ಒಂದೇ ಕರ್ನಾಟಕ ಒಂದೇ, ಹೊತ್ತಿತೋ ಹೊತ್ತಿತೋ ಕನ್ನಡದ ದೀಪ, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಗೀತೆ ಗಳನ್ನು ಹಾಡಿದರು. ಈ ಸಂದರ್ಭ ೨೦೨೨-೨೩ನೇ ಸಾಲಿನ ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ೧೨೫ ಕ್ಕೆ ೧೨೫ ಅಂಕ ಪಡೆದ ಪೊನ್ನಂಪೇಟೆ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡÀಲಾಯಿತು.

ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಕನ್ನಡ ನಾಡು ನುಡಿಯ ಮಹತ್ವ ಸಾರುವ ಗೀತೆಗಳಿಗೆ ನೃತ್ಯ, ಪುಣ್ಯ ಕೋಟಿ ಕಥಾ ಪ್ರಸಂಗ, ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಕಿರು ನಾಟಕ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯ ನಿರ್ವಹಣಾ ಧಿಕಾರಿ ಅಪ್ಪಣ್ಣ, ತಾಲೂಕು ವೈದ್ಯಾ ಧಿಕಾರಿ ಡಾ.ಯತಿರಾಜ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್, ಪಶುವೈದ್ಯಾ ಧಿಕಾರಿ ಡಾ.ಶಾಂತೇಶ್, ಪೊನ್ನಂಪೇಟೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಕೆ. ದೀನಾ, ಬಿಸಿಎಂ ಅಧಿಕಾರಿ ಕವಿತ ಕುಲಕರ್ಣಿ, ಕರ್ನಾಟಕ ಪಬ್ಲಿಕ್ ಶಾಲೆ ಉಪ ಪ್ರಾಂಶುಪಾಲ ಎಂ.ಯು.ಚAಗಪ್ಪ, ಬೋಧಕ ಬೋಧಕೇತರ ಸಿಬ್ಬಂದ, ತಾಲೂಕು ಕಚೇರಿ ಸಿಬ್ಬಂದಿ, ಎಸ್‌ಡಿಎಂಸಿಯವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎನ್‌ಸಿಸಿ ಅಧಿಕಾರಿ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.