*ಸಿದ್ದಾಪುರ, ನ. ೧: ಮಡಿಕೇರಿ ನಗರದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಿದ್ದಾಪುರದ ಶ್ರೀ ಕೃಷ್ಣ ವಿದ್ಯಾಮಂದಿರದ ವಿದ್ಯಾರ್ಥಿನಿ ಹೆಚ್.ಎಂ. ಭೂಮಿಕಾಗೆ ರೂ. ೧ ಲಕ್ಷ ಪ್ರೋತ್ಸಾಹ ಧನ ನೀಡಲಾಯಿತು. ವಿದ್ಯಾರ್ಥಿನಿಯ ಸಾಧನೆಗೆ ವಿದ್ಯಾಮಂದಿರದ ಆಡಳಿತ ಮಂಡಳಿ ಶ್ಲಾಘನೆ ವ್ಯಕ್ತಪಡಿಸಿದೆ.