ಮಡಿಕೇರಿ, ನ. ೧: ಹೆಬ್ಬಾಲೆ ವಿದ್ಯಾವರ್ಧಕ ಸಂಘದ ಮಹಾಸಭೆಯು ಸ್ಥಳೀಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಹೆಚ್.ಎಲ್. ರಮೇಶ ಮಾತನಾಡಿ, ಸಂಘದ ಏಳಿಗೆಗಾಗಿ ಅಭಿವೃದ್ಧಿಗಾಗಿ ಎಲ್ಲಾ ನಿರ್ದೇಶಕರು ಸದಸ್ಯರು ಒಟ್ಟುಗೂಡಿ ಶ್ರಮಿಸಬೇಕಾಗಿದೆ ಎಂದರು.

ಸಭೆಯಲ್ಲಿ ಮೃತಪಟ್ಟ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. ಸಂಘದ ವರದಿಯನ್ನು ಮುಖ್ಯ ಶಿಕ್ಷಕ ಬಸವರಾಜು ವಾಚಿಸಿದರು, ಆಡಿಟ್ ವರದಿಯನ್ನು ಯೋಗರಾಜ್ ಓದಿದರು.