ಕೂಡಿಗೆ, ನ. ೧: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯ ಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕರ ಪಾತ್ರವು ಮುಖ್ಯವಾಗಿರುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಕೆ.ಡಿ. ತಾರಾಮಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶಿಕ್ಷಣ ಮಕ್ಕಳ ಜೀವನವನ್ನು ಅತ್ಯುತ್ತಮವಾಗಿ ರೂಪಿಸುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಉತ್ತಮ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಇದಕ್ಕೆ ಪೋಷಕರ ಮಾರ್ಗದರ್ಶನ ಅಗತ್ಯ, ವಿದ್ಯಾರ್ಥಿಗಳು ಯಾವುದೇ ಕೂಡಿಗೆ, ನ. ೧: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯ ಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕರ ಪಾತ್ರವು ಮುಖ್ಯವಾಗಿರುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಕೆ.ಡಿ. ತಾರಾಮಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶಿಕ್ಷಣ ಮಕ್ಕಳ ಜೀವನವನ್ನು ಅತ್ಯುತ್ತಮವಾಗಿ ರೂಪಿಸುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಉತ್ತಮ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಇದಕ್ಕೆ ಪೋಷಕರ ಮಾರ್ಗದರ್ಶನ ಅಗತ್ಯ, ವಿದ್ಯಾರ್ಥಿಗಳು ಯಾವುದೇ ಮೊಬೈಲ್ನಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದರು. ಕೇವಲ ಪಠ್ಯ ಮಾತ್ರವಲ್ಲ, ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಬೇಕು ಎಂದು ಹೇಳಿದರು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಧರಣಿ, ಶಿಕ್ಷಕರಾದ ಟಿ.ಎಸ್. ವಿನೋದ, ಹೆಚ್.ವಿ. ಲತಾಮಣಿ, ಎಸ್.ಆರ್. ಸುನೀತಾ, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.